ಮೈಸೂರು: ಸಿದ್ದರಾಮನಹುಂಡಿಯಲ್ಲಿ (Siddaramana Hundi) ಕಾರು-ಬೈಕ್ ಡಿಕ್ಕಿಯಿಂದ ಜಗಳ ನಡೆದಿದೆ. ಬಿಜೆಪಿಯವರು (BJP) ಇದಕ್ಕೆ ರಾಜಕೀಯ ಬಣ್ಣ ಬಳಿಯುತ್ತಿದ್ದಾರೆ ಎಂದು ವರುಣಾ ಶಾಸಕ ಡಾ.ಯತೀಂದ್ರ (Yathindra Siddaramaiah) ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಆರೋಪ ವಿಚಾರವಾಗಿ ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗಲಭೆ ಮಾಡಿಸಲು ನಿಸ್ಸೀಮರು. ಎಷ್ಟೇ ಪ್ರಚೋದನೆ ಮಾಡಿದರು ಅವರ ಪ್ರಚೋದನೆಗೆ ಕಾಂಗ್ರೆಸ್ (Congress) ಕಾರ್ಯಕರ್ತರು ಒಳಗಾಗಬಾರದು. ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಈ ರೀತಿ ಕಾರ್ಯತಂತ್ರ ಮಾಡುತ್ತಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ರಣಾಂಗಣವಾದ ವರುಣಾ ಕಣ; ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ
ಬಿಜೆಪಿ ಹಸಿ ಸುಳ್ಳು ಹೇಳುತ್ತಾ ದ್ವೇಷ ಹುಟ್ಟುಹಾಕಿ ತನ್ನ ಬೇಳೆ ಬೇಯಿಸಿಕೊಳ್ಳುವ ತಂತ್ರ ಮಾಡುತ್ತಿದೆ. ಗಲಾಟೆ ನಡೆದ ವೇಳೆ ಸಿದ್ದರಾಮಯ್ಯ ಕುಟುಂಬದವರು ಯಾರೂ ಅಲ್ಲಿ ಇರಲಿಲ್ಲ. ಆದರೂ ದುರುದ್ದೇಶದಿಂದ ನಮ್ಮ ಕುಟುಂಬದ ಸದಸ್ಯರ ಮೇಲೆ ದೂರು ನೀಡಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮನಹುಂಡಿ ಏನು ಸಿದ್ದರಾಮಯ್ಯ ಸಂಸ್ಥಾನನಾ?: ಪ್ರತಾಪ್ ಸಿಂಹ ಕಿಡಿ