ಬಿಜೆಪಿ ಅಭ್ಯರ್ಥಿ ಪರ ಯೋಗಿ ಭರ್ಜರಿ ಪ್ರಚಾರ – ರಾಮಮಂದಿರ ಉದ್ಘಾಟನೆಗೆ ಆಹ್ವಾನ

Public TV
3 Min Read
yogi adityanath 8

ರಾಯಚೂರು: ರಾಮಮಂದಿರ (Ram Mandira) ನಿರ್ಮಾಣ ಕಾರ್ಯ ಮುಗಿಯುತ್ತಾ ಬಂದಿದೆ. ಆ ಶುಭ ಕಾರ್ಯಕ್ಕೆ ನಿಮಗೆ ಕರೆಯಲು ನಾನು ಬಂದಿದ್ದೇನೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ತಿಳಿಸಿದರು.

ಬಿಜೆಪಿ (BJP) ಅಭ್ಯರ್ಥಿ ಡಾ‌.ಶಿವರಾಜ್ ಪಾಟೀಲ್ ಪರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಯಚೂರಿನಲ್ಲಿ (Raichur) ಮತಬೇಟೆ ನಡೆಸಿದರು. ನಗರದ ಕೃಷಿ ವಿವಿ ಆವರಣದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಡಬಲ್ ಇಂಜಿನ್ ಸರ್ಕಾರದ ಯೋಜನೆಗಳ ಪಟ್ಟಿ ನೀಡಿ ಮತಶಿಕಾರಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ವಾಲ್ಮೀಕಿ ಜಯಂತಿ ದಿನ ಎಲ್ಲಾ ದೇವಸ್ಥಾನದಲ್ಲಿ ಪೂಜೆ ನಡೆಯುತ್ತದೆ. ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ನಡೆದಿದೆ. ರಾಮಮಂದಿರ ನಿರ್ಮಾಣ ಕಾರ್ಯವು 2024ರ ಜನವರಿಯಲ್ಲಿ ಮುಗಿಯುತ್ತದೆ. ಹೊಸ ಅಯೋಧ್ಯೆ ದರ್ಶನ ನಿಮಗೆ ಸಿಗಲಿದೆ. ರಾಮನೇ ಇಲ್ಲವೆಂದು ಹೇಳುವವರೇ ಈಗ ರಾಮನ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

yogi adityanath 1 2

ಡಬಲ್ ಎಂಜಿನ್ ಸರ್ಕಾರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನಡೆಸುವ ಸರ್ಕಾರವಾಗಿದೆ. ಕೊರೊನಾ ಕಾಲದಲ್ಲಿ 200 ಕೋಟಿ ಜನರಿಗೆ ಲಸಿಕೆ ನೀಡಿದ್ದೇವೆ. 4 ಕೋಟಿ ಜನರಿಗೆ ಪಿಎಂ ಆವಾಸ್ ಅಡಿಯಲ್ಲಿ ಮನೆ ನೀಡಿದ್ದೇವೆ. ಕಾಂಗ್ರೆಸ್ ರಿವರ್ಸ್ ಗೇರ್ ಆಗಿತ್ತು. ಟೀಂ ಇಂಡಿಯಾದ ಕ್ಯಾಪ್ಟನ್ ತರ ಮೋದಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಯುವ ಜನತೆ ಜೊತೆಗೆ ಭೇದ ಭಾವ ಮಾಡುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಬಿಜೆಪಿ ಬಂದ್ರೆ ಅಭಿವೃದ್ಧಿ ಕೆಲಸ ಮಾಡಲು ಅನುಕೂಲವಾಗುತ್ತದೆ. ರಾಯಚೂರಿನ ಬಿಜೆಪಿ ಅಭ್ಯರ್ಥಿ ಶಿವರಾಜ್ ಪಾಟೀಲ್ ಡಾಕ್ಟರ್ ಇದ್ದಾರೆ. ಎಲ್ಲಾ ರೋಗಕ್ಕೆ ಔಷಧಿ ಗೊತ್ತು, ಕಾಂಗ್ರೆಸ್ ಓಡಿಸುವುದು ಗೊತ್ತು ಎಂದು ಹೇಳಿದರು.

congress

ಭಾರತ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಆಗುತ್ತಿದೆ. ಭಾರತದ ಅಭಿವೃದ್ಧಿ ಇಡೀ ವಿಶ್ವವೇ ಎದುರು ನೋಡುವಂತೆ ಆಗುತ್ತಿದೆ. ರಾಮಾಯಣ ಕಾಲದಲ್ಲಿ ಹ‌ನುಮಂತ ತ್ಯಾಗ ಮಾಡಿದಂತೆ ಈಗಿನ ಕಾಲದಲ್ಲಿ ದೇಶಕ್ಕಾಗಿ ಮೋದಿ ತ್ಯಾಗ ಮಾಡುತ್ತಿದ್ದಾರೆ. ರೈಲು, ವಿಮಾನ ಹೀಗೆ ಹತ್ತಾರು ಅಭಿವೃದ್ಧಿ ಮಾಡಿದ್ದೇವೆ. ರಾಯಚೂರಿನಲ್ಲಿ ಟೆಕ್ಸ್ ಟೈಲ್ ಪಾರ್ಕ್ ಆಗಲಿದೆ. ರಾಯಚೂರು ವಿಮಾನ ನಿಲ್ದಾಣದ ಕಾಮಗಾರಿಯೂ ನಮ್ಮ ಕೊಡುಗೆ ಆಗಿದೆ. ಕಾಂಗ್ರೆಸ್ (Congress) ಸರ್ಕಾರದ ಕಾಲದಲ್ಲಿ ರೈತರು ತಲೆಬಾಗಿಕೊಂಡು ಓಡಾಟ ಮಾಡುತ್ತಿದ್ದರು. ಬಿಜೆಪಿ ಸರ್ಕಾರ ಬಂದ ಮೇಲೆ ರೈತರು ತಲೆ ಎತ್ತಿ ಓಡಾಡುತ್ತಿದ್ದಾರೆ ಎಂದು ತಿಳಿಸಿದರು.

ಐಟಿ ಹಬ್ ಹಿಂದಿನ ಕಾಲದ ನಳಂದ ವಿವಿ ನೆನಪಿಸುತ್ತಿದೆ. ಉತ್ತರ ಪ್ರದೇಶದಲ್ಲಿ ಜನರು ನಮ್ಮನ್ನು ಇಷ್ಟು ಏಕೆ ಪ್ರೀತಿ ಮಾಡುತ್ತಾರೆ ಅಂದ್ರೆ, ಅದು ಡಬಲ್ ಇಂಜಿನ್ ಸರ್ಕಾರದ ಸಾಧನೆ ಆಗಿದೆ. ರಾಮ ರಾಜ್ಯ ಕಲ್ಪನೆ ಉತ್ತರ ಪ್ರದೇಶದಲ್ಲಿ ಮತ್ತೆ ಡಬಲ್ ಎಂಜಿನ್ ಸರ್ಕಾರದಿಂದ ಆಗಿದೆ. ಪಿಎಫ್‌ಐನ ಸೊಂಟ ನಾವು ಮುರಿದಿದ್ದೇವೆ, ಈಗ ಪಿಎಫ್‌ಐ ತಲೆನೇ ಎತ್ತುವುದಿಲ್ಲ ಎಂದರು. ಇದನ್ನೂ ಓದಿ: ‘ಮನ್ ಕಿ ಬಾತ್’ ದೇಶದ ಭಾವನೆ ಅಭಿವ್ಯಕ್ತಪಡಿಸುವ ವೇದಿಕೆಯಾಗಿದೆ: ಬೊಮ್ಮಾಯಿ

ತುಂಗಾ, ಕೃಷ್ಣ ನದಿ ಹರಿಯುವ ಹರಿದಾಸರ ನಾಡಿನ ಜನರಿಗೆ ನಮಸ್ಕಾರ ಎಂದು ಯೋಗಿ ಕನ್ನಡದಲ್ಲಿ ಭಾಷಣ ಆರಂಭಿಸಿದರು. ಇದು ಹರಿದಾಸರ ಭೂಮಿ ಭಾರತದ ಸನಾತನ ಧರ್ಮದ ಸಂದೇಶ ನಾಡಿನ ತುಂಬಾ ಹರಡಿದ್ದಾರೆ. ನಿಜಾಮರ ವಿರುದ್ಧ ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದ ನಾಗರಿಕರಿಗೆ ನಮನ ಸಲ್ಲಿಸುತ್ತೇನೆ. ನಾನು ಅಯೋಧ್ಯೆ ಪುಣ್ಯ ಭೂಮಿಯಿಂದ ಇಲ್ಲಿಗೆ ಬಂದಿದ್ದೇನೆ. ಉತ್ತರ ಪ್ರದೇಶ ಮತ್ತು ಕರ್ನಾಟಕಕ್ಕೆ ರಾಮ – ಹನುಮಂತ ಸಂಬಂಧ ಇದೆ. ನಾನು ಇವತ್ತು ಹನುಮಂತನ ಭೂಮಿಗೆ ಬಂದಿದ್ದಕ್ಕೆ ಖುಷಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ರೈತರ ಶೇ.85ರಷ್ಟು ಹಣವನ್ನ ಕಾಂಗ್ರೆಸ್ಸಿನವರೇ ನುಂಗಿ ನೀರು ಕುಡಿದಿದ್ದಾರೆ – ಮೋದಿ ಸಿಡಿಮಿಡಿ

Share This Article