ಬೆಂಗಳೂರು: ಬಿಜೆಪಿಯ (BJP) ಚುನಾವಣಾ (Election) ಚಾಣಕ್ಯ ಅಮಿತ್ ಶಾ (Amit Shah) ಮತ್ತೆ ರಾಜ್ಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇದೇ ತಿಂಗಳ 25ರಂದು ಬೆಂಗಳೂರಿಗೆ ಅಮಿತ್ ಶಾ ಒಂದು ದಿನದ ಪ್ರವಾಸ ಹಾಕಿಕೊಂಡಿದ್ದಾರೆ.
ಅಮಿತ್ ಶಾ ಕಳೆದ ವರ್ಷ ಡಿ. 29ರಂದು ರಾಜ್ಯಕ್ಕೆ ಬಂದು ಇನ್ನೂ ಒಂದು ತಿಂಗಳಾಗಿಲ್ಲ. ಅಷ್ಟರಲ್ಲಾಗಲೇ ಮತ್ತೊಮ್ಮೆ ಬರುತ್ತಿರುವುದು ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಈ ಬಾರಿ ಬೆಂಗಳೂರಿನಲ್ಲಿ ಕೆಲವು ಅಭಿವೃದ್ಧಿ ಯೋಜನೆಗಳಿಗೆ ಅಮಿತ್ ಶಾ ಚಾಲನೆ ಕೊಡಲಿದ್ದಾರೆ. ಇದರ ಜತೆಗೆ ರಾಜ್ಯ ಬಿಜೆಪಿಯ ಚುನಾವಣಾ ತಯಾರಿಯ ಅವಲೋಕನ ಮಾಡಲಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಜತೆ ಮಹತ್ವದ ಸಭೆಗಳನ್ನೂ ನಡೆಸಲು ಅಮಿತ್ ಶಾ ತೀರ್ಮಾನಿಸಿದ್ದಾರೆ.
Advertisement
Advertisement
ಇನ್ನೂ ಕಳೆದ ಬಾರಿ ಕೊಟ್ಟಿದ್ದ ಟಾಸ್ಕ್ ಬಗ್ಗೆಯೂ ಅಮಿತ್ ಶಾ ಮಾಹಿತಿ ಪಡೆಯಲಿದ್ದಾರೆ. ಈ ಬಾರಿಯ ಅಮಿತ್ ಶಾ ಆಗಮನ ಸಂಕ್ರಾಂತಿ ಬಳಿಕದ ಕ್ರಾಂತಿಗೆ ಕಾರಣವಾಗುತ್ತಾ ಎನ್ನುವ ಕುತೂಹಲ ಮನೆ ಮಾಡಿದೆ. ಸಂಕ್ರಾಂತಿ ಬಳಿಕ ಹಳೇ ಮೈಸೂರು ಭಾಗದ ಮತ್ತಷ್ಟು ಪ್ರಭಾವಿಗಳು ಬಿಜೆಪಿ ಸೇರುವ ಸಾಧ್ಯತೆ ಇದೆ. ಇವರೆಲ್ಲರನ್ನು ಅಮಿತ್ ಶಾ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಪಕ್ಷದೊಳಗೆ ಚರ್ಚೆ ನಡೆದಿದೆ. ಎಲ್ಲವೂ ಅಂದುಕೊಂಡಂತಾದರೆ, ಕೆಲವರು ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ಮತ್ತೆ ರಷ್ಯಾ ಕ್ಷಿಪಣಿ ದಾಳಿ – 12 ಮಂದಿ ಸಾವು
Advertisement
Advertisement
ಈ ಬಾರಿ ಅಮಿತ್ ಶಾ ಹಿಂದುತ್ವ ಮತ್ತು ಅಭಿವೃದ್ಧಿ ಅಜೆಂಡಾ ಜತೆ ರಾಜ್ಯಕ್ಕೆ ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಚುನಾವಣಾ ತಯಾರಿಗೆ ಪಕ್ಕಾ ರೂಟ್‌ಮ್ಯಾಪ್ ಹಾಕಿಕೊಟ್ಟು ಹೋಗ್ತಾರೆ ಎನ್ನಲಾಗಿದೆ. ಅಮಿತ್ ಶಾ ಸ್ವಾಗತಕ್ಕೆ ರಾಜ್ಯ ಬಿಜೆಪಿ ಪಾಳಯ ಭರ್ಜರಿಯಾಗಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದನ್ನೂ ಓದಿ: ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವುದಿಲ್ಲ: ಬೊಮ್ಮಾಯಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k