ಕಲಬುರಗಿ: ರಾಜ್ಯಾದ್ಯಂತ ಭಾರತೀಯ ಜನತಾ ಪಕ್ಷದ (BJP) ಪರವಾದ ವಾತಾವರಣ ನಿರ್ಮಾಣವಾಗಿದ್ದು, ಮುಂಬರುವ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಹೇಳಿದರು.
ಶನಿವಾರ ಅವರು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಶಕ್ತಿಗೂ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರವುದನ್ನು ತಡೆಯಲು ಆಗುವುದಿಲ್ಲ. ಅನೇಕರು ತಾವೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಕನ ಕನಸು ಕಾಣುತ್ತಾ ಓಡಾಟ ನಡೆಸಿದ್ದಾರೆ. ಆದರೆ, ಅದ್ಯಾವುದು ಕಾರ್ಯರೂಪಕ್ಕೆ ಬರುವುದಿಲ್ಲ ಎಂದು ಹೇಳಿದರು.
Advertisement
Advertisement
ನಿಶ್ಚಿತವಾಗಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಮೋದಿಯಂತಹ (Narendra Modi) ಒಬ್ಬ ಪ್ರಧಾನಿ ದೇಶಕ್ಕೆ ಲಭಿಸಿದ್ದು, ನಮ್ಮ ಸೌಭಾಗ್ಯವಾಗಿದೆ. ಇಂತಹ ಮಹಾನಾಯಕನ ನೇತೃತ್ವದಲ್ಲಿ ನಾವು ಅಧಿಕಾರಕ್ಕೆ ಬರಲಿದ್ದೇವೆ. ರಾಜ್ಯದ ಉದ್ದಗಲಕ್ಕೂ ನಮ್ಮ ಪ್ರವಾಸ ಪ್ರಾರಂಭವಾಗಿದೆ. ವಿಜಯಪುರಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ಆಗಮಿಸುತ್ತಿದ್ದಾರೆ. ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಮತ್ತೆ ಎರಡೂ ಮೂರು ಬಾರಿ ಕರ್ನಾಟಕಕ್ಕೆ (Karnataka) ಬರಲಿದ್ದಾರೆ ಎಂದರು.
Advertisement
Advertisement
ಬಿಜೆಪಿಯಲ್ಲಿ ನಾಯಕತ್ವ ಕೊರತೆಯಿದೆ ಎಂಬ ಡಿ.ಕೆ.ಶಿವಕುಮಾರ್ (DK Shivakumar) ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ (Congress) ಪಕ್ಷದ ನಾಯಕರು ಏನನ್ನೂ ಸಹ ಮಾಡಿಲ್ಲ. ಏನ್ ಮಾಡಿದ್ದಾರೆ ಅನ್ನೋದು ಒಂದೆರಡು ಮೂರು ಮಾತು ಹೇಳಲಿ ನೋಡಣ ಎಂದು ಅವರು, ನಾವು ಮಾಡಿರುವ ಕೆಲಸವನ್ನೇ ಜನ ಹಾಡಿ ಹೋಗಳುತ್ತಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಪಕ್ಷದ ನಾಯಕರು ಒಳ್ಳೆಯ ಕೆಲಸ ಮಾಡಿದ್ದರೆ, ಅಧಿಕಾರ ಯಾಕೆ ಕಳೆದುಕೊಂಡರು. ಹೀಗಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಈ ರೀತಿ ಮಾತನಾಡುವುದು ಸರಿಯಲ್ಲ. ವಿರೋಧ ಪಕ್ಷದ ಮುಖಂಡರಾಗಿ ಜವಾಬ್ದಾರಿಯುತವಾಗಿ ಮಾತನಾಡಲಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಪ್ರಧಾನಿ ಮೋದಿಗೆ ನಿರ್ದೇಶಕ ಅನುರಾಗ್ ಕಶ್ಯಪ್ ಟಾಂಗ್ : ವಿವೇಕ್ ಅಗ್ನಿಹೋತ್ರಿ ತಿರುಗೇಟು
ಜಮೀರ್ ಅಹ್ಮದ್ ಅವರಿಗೆ 500 ಕೋಟಿ ಆಫರ್ ಬಗ್ಗೆ ಪ್ರತಿಕ್ರಿಯೆ ನೀಡಲು ಯಡಿಯೂರಪ್ಪ ನಿರಾಕರಿಸಿದರು. ನನ್ನನ್ನು ಯಾವುದೇ ರೀತಿಯಲ್ಲಿ ಪಕ್ಷದಲ್ಲಿ ನಿರ್ಲಕ್ಷ್ಯ ಮಾಡುತ್ತಿಲ್ಲ. ಯಡಿಯೂರಪ್ಪನಿಗೆ ಕೊಡಬೇಕಾದ ಎಲ್ಲಾ ಗೌರವ ಮತ್ತು ಸ್ಥಾನಮಾನಗಳನ್ನು ಪಕ್ಷ ನೀಡಿದೆ. ರಾಜ್ಯ ಮಟ್ಟದಲ್ಲಿ, ಕೇಂದ್ರ ಮಟ್ಟದಲ್ಲಿ ನನಗೆ ತುಂಬಾ ಗೌರವಯುತವಾಗಿ ನಡೆದುಕೊಳ್ಳುತ್ತಿದ್ದು, ನಾನು ತುಂಬಾ ಅಭಾರಿಯಾಗಿದ್ದೇನೆ ಎಂದರು. ಇದನ್ನೂ ಓದಿ: ತನ್ನ ಬೆಕ್ಕು ಕದ್ದಿದ್ದಾರೆಂದು ಶಂಕಿಸಿ ನೆರೆಮನೆಯವರ ಪಾರಿವಾಳಗಳಿಗೆ ವಿಷ ಉಣಿಸಿದ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k