ಬೆಂಗಳೂರು: ವರನಟ ಡಾ. ರಾಜ್‍ಕುಮಾರ್ 12ನೇ ವರ್ಷದ ಪುಣ್ಯ ಸ್ಮರಣೆಗೆ ನೀತಿ ಸಂಹಿತೆ ಎಫೆಕ್ಟ್ ತಟ್ಟಿದೆ. ನಾಳೆ ಡಾ. ರಾಜ್ ಪುಣ್ಯಭೂಮಿಯಲ್ಲಿ ಸರಳವಾಗಿ ಪುಣ್ಯಸ್ಮರಣೆ ಆಚರಿಸಲು ಕಂಠೀರವ ಸ್ಟುಡಿಯೋ ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ.
ರಾಜ್‍ಕುಮಾರ್ ಅವರ ಪುಣ್ಯ ಸ್ಮರಣೆ ದಿನದಂದು ಪ್ರತಿವರ್ಷ ಸುಮಾರು 3 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿತ್ತು. ಈ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆ ಬಂದಿರುವುದರಿಂದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಶಾಮಿಯಾನ, ಊಟದ ವ್ಯವಸ್ಥೆ ಇಲ್ಲದೆ ಮಾಡಲಾಗುತ್ತಿದೆ. ಅಲ್ಲದೇ ಸರಳವಾಗಿ ಪುಣ್ಯಸ್ಮರಣೆ ಆಚರಣೆ ನಿರ್ಧಾರ ಮಾಡಲಾಗಿದೆ.
Advertisement
ಪ್ರತಿವರ್ಷ ರಾಜ್ಯದ ವಿವಿಧ ಜಿಲ್ಲೆಗಳಿಂದ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ 3 ಸಾವಿರಕ್ಕೂ ಅಧಿಕ ಅಭಿಮಾನಿಗಳು ಆಗಮಿಸುತ್ತಿದ್ದರು. ರಾಜ್ ಪುಣ್ಯ ಭೂಮಿಯ ದರ್ಶನ ಪಡೆಯಲು ಬರುತ್ತಿದ್ದ ಅಭಿಮಾನಿಗಳಿಗೆ ಈ ಊಟ ಹಾಗೂ ನೆರಳಿನ ವ್ಯವಸ್ಥೆಯನ್ನು ಮಾಡಲಾಗುತ್ತಿತ್ತು.