ಕಲಬುರಗಿ/ಬಳ್ಳಾರಿ: ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿಯಿದ್ದು, ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ಈ ಬಾರಿಯ ಚುನಾವಣೆಯ ವಿಶೇಷವಾಗಿ ಆಯೋಗ ಸಂಪೂರ್ಣ ಮಹಿಳೆಯರಿಂದ ನಿರ್ವಹಣೆ ಮಾಡುವ ಪಿಂಕ್ ಬೂತ್ ಮತಕೇಂದ್ರಗಳನ್ನು ಸ್ಥಾಪಿಸಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಪಿಂಕ್ ಬೂತ್ ಸ್ಥಾಪನೆಯಾಗುತ್ತಿರುವುದು ಈ ಚುನಾವಣೆಯ ವಿಶೇಷ.
Advertisement
Advertisement
ರಾಜ್ಯದ 224 ಮತ ಕ್ಷೇತ್ರದಲ್ಲೂ ಹೆಚ್ಚಿನ ಮಹಿಳಾ ಮತದಾರರು ಇರುವ ಮತಗಟ್ಟೆಗಳನ್ನು ಗುರುತಿಸಿ ಈ ಪಿಂಕ್ ಮತಕೇಂದ್ರ ಸ್ಥಾಪಿಸಿದೆ. ಇವುಗಳನ್ನೂ ಸಂಪೂರ್ಣವಾಗಿ ಮಹಿಳೆಯರೇ ನಿರ್ವಹಿಸಲಿದ್ದು, ಮಹಿಳಾ ಪೊಲೀಸರು ನಿಯೋಜನೆ ಮಾಡಲಾಗಿದೆ.
Advertisement
ಕುರಿತು ಮಾಹಿತಿ ನೀಡಿರುವ ಕಲಬುರಗಿ ಜಿಲ್ಲಾಧಿಕಾರಿ ಆರ್ ವೆಂಕಟೇಶ್, ಈ ಬಾರಿ ಮಹಿಳಾ ಮತದಾರರು ಹೆಚ್ಚಿರುವ ಬೂತ್ ಗಳನ್ನ ಗುರುತಿಸಿ ಮೊದಲ ಬಾರಿಗೆ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಒಂದರಂತೆ ಜಿಲ್ಲೆಯಲ್ಲಿ 9 ಪಿಂಕ್ ಪೋಲಿಂಗ್ ಬೂತ್ ಸ್ಥಾಪನೆ ಮಾಡಲಾಗಿದೆ. ಈ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಂದು ಮತದಾನ ಮಾಡಲು ಹೊಸ ತಂತ್ರವನ್ನು ಪ್ರಯೋಗ ಮಾಡಿದ್ದಾಗಿ ತಿಳಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಎಲ್ಲರೂ ಬಂದು ಮತ ಚಲಾವಣೆ ಮಾಡಿ ಎಂದು ಮನವಿ ಮಾಡಿದ್ದಾರೆ.
Advertisement
ಜಿಲ್ಲೆಯಲ್ಲಿ 2370 ಮತಗಟ್ಟೆ ಕೇಂದ್ರಗಳನ್ನ ಸ್ಥಾಪಿಸಲಾಗಿದ್ದು, 21 ಲಕ್ಷ 17 ಸಾವಿರ 248 ಮತದಾರರು ತಮ್ಮ ಮತದಾನದ ಹಕ್ಕನ್ನ ಚಲಾಯಿಸಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 5890 ಸಿಬ್ಬಂದಿಗಳನ್ನ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಭದ್ರತೆಗಾಗಿ ಸುಮಾರು 14 ಸಾವಿರ ಸಿಬ್ಬಂದಿಗಳನ್ನ ನೇಮಕಮಾಡಿದ್ದಾಗಿ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 2127 ಮತಗಟ್ಟೆಗಳಿದ್ದರೇ ಈ ಪೈಕಿ 17 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ 9,54,559 ಪುರುಷರು ಹಾಗೂ 9,56,770 ಮಹಿಳಾ ಮತದಾರದಿದ್ದಾರೆ.