ಬೆಂಗಳೂರು: ವಿಧಾನಸಭಾ ಚುನಾವಣೆ (Karnataka Election) ಹತ್ತಿರ ಬರುತ್ತಿದ್ದಂತೆ ಈಗ ಚುನಾವಣಾ ಆಯೋಗದಿಂದ (Election Commission) 221 ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ.
ಪ್ರಸ್ತುತ ಪ್ರಕಟವಾಗಿರುವ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು – 6,50,532
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾರರು – 1,66,521
— Chief Electoral Officer, Karnataka (@ceo_karnataka) January 5, 2023
Advertisement
ಚಿಲುಮೆಯ ಗೊಂದಲದಲ್ಲಿರುವ ಚಿಕ್ಕಪೇಟೆ ಶಿವಾಜಿನಗರ, ಮಹಾದೇವಪುರ ವಿಧಾನಸಭಾ ಕ್ಷೇತ್ರದ ಅಂತಿಮ ಪಟ್ಟಿ ಮಾತ್ರ ಇನ್ನೂ ಪ್ರಕಟವಾಗಿಲ್ಲ. ಇನ್ನುಳಿದಂತೆ ಎಲ್ಲಾ ಕ್ಷೇತ್ರದ ಪಟ್ಟಿಯೂ ಸಾರ್ವಜನಿಕ ರಿಗೆ ಲಭ್ಯವಿದೆ.
Advertisement
ಮತದಾರರ ಪಟ್ಟಿಯಲ್ಲಿ (Voter List) ಗೊಂದಲವಿದ್ದರೆ www.ceo.karnataka.gov.in ವೆಬ್ ಸೈಟ್ ನಲ್ಲಿ ಪಿಡಿಎಫ್ ಮಾದರಿಯಲ್ಲಿ ಮತದಾರರು ತಮ್ಮ ಹೆಸರು ಮುಂತಾದ ವಿವರಗಳು ಪರಿಶೀಲಿಸಬಹುದು ಅಥವಾ www.nvsp.in ಅಥವಾ Voter Portal ಅಥವಾ Voter Helpline Mobile App ಮೂಲಕ ಮತದಾರರು ತಮ್ಮ ಮಾಹಿತಿ ತಪ್ಪಿದ್ದಲ್ಲಿ ಮತ್ತೆ ಬದಲಾವಣೆಗೆ ಅರ್ಜಿ ಸಲ್ಲಿಸಬಹುದು ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಯಾರೇ ಬಂದ್ರು ಹಳೆಮೈಸೂರು ಭಾಗದಲ್ಲಿ ಜೆಡಿಎಸ್‍ನ್ನು ಅಲ್ಲಾಡಿಸಲು ಆಗಲ್ಲ: ನಿಖಿಲ್ ಕುಮಾರಸ್ವಾಮಿ
Advertisement
ರಾಜ್ಯದ ಪ್ರಸ್ತುತ ಅಂತಿಮ ಮತದಾರರ ಪಟ್ಟಿ ಬಿಡುಗಡೆ
7 ಲಕ್ಷ ಯುವ ಮತದಾರರು ಹೊಸದಾಗಿ ಸೇರ್ಪಡೆ
ರಾಜ್ಯದ ಮತದಾರರ ಲಿಂಗಾನುಪಾತದಲ್ಲಿ ಮಹಿಳಾ ಪ್ರಾತಿನಿಧ್ಯ ಏರಿಕೆ, 1000 ಪುರಷರಿಗೆ/988 ಮಹಿಳೆಯರು. ಕಳೆದ ಬಾರಿ 983 ಅನುಪಾತವಿತ್ತು
ಈ ಬಾರಿ 5 ಪಾಯಿಂಟ್ ಮಹಿಳಾ ಮತದಾರರ ಅನುಪಾತದಲ್ಲಿ ಏರಿಕೆ
— Chief Electoral Officer, Karnataka (@ceo_karnataka) January 5, 2023
Advertisement
ಪ್ರಸ್ತುತ ರಾಜ್ಯದಲ್ಲಿ ಒಟ್ಟು 5,05,48,553 ಮತದಾರರಿದ್ದಾರೆ. ಈ ಪೈಕಿ ಪುರುಷರು 2,54,49,725, ಮಹಿಳೆಯರು 2,50,94,326, ಇತರರು 4,502 ಮಂದಿ ಇದ್ದಾರೆ.
ಪ್ರಸ್ತುತ ಪ್ರಕಟವಾಗಿರುವ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು (6,50,532) ಇದ್ದರೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾರರು (1,66,521) ಇದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k