ಉಡುಪಿ: ಕುಂದಾಪುರ ಕ್ಷೇತ್ರದಲ್ಲಿ ಬಿಜೆಪಿಯ ಕಿರಣ್ ಕುಮಾರ್ ಕೊಡ್ಗಿ (Kiran Kumar Kodgi) ಜಯ ಸಾಧಿಸಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ (Halady Srinivas Shetty) ಈ ಬಾರಿ ತ್ಯಾಗ ಮಾಡಿದ್ದರು. ಕಾಂಗ್ರೆಸ್‌ನಿಂದ ಮೊಳಹಳ್ಳಿ ದಿನೇಶ್ ಹೆಗ್ಡೆ ಕಣದಲ್ಲಿದ್ದರು.
Advertisement
ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ವಾಜಪೇಯಿ ಎಂದೇ ಫೇಮಸ್. ಕಳೆದ ಐದು ಅವಧಿ ಅಂದರೆ 25 ವರ್ಷಗಳ ಕಾಲ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ಶಾಸಕ. ಈ ಬಾರಿ ಕೂಡ ಹಾಲಾಡಿ ಶ್ರೀನಿವಾಸ ಶೆಟ್ಟಿ ತನ್ನ ಕೊನೆಯ ಚುನಾವಣೆಯನ್ನು ಎದುರಿಸುತ್ತಾರೆ ಎಂಬ ಮಾತುಗಳಿದ್ದವು. ಆದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದರು. ಇದನ್ನೂ ಓದಿ: 59 ಕ್ಷೇತ್ರಗಳಲ್ಲಿ ಮುನ್ನಡೆ ಅಂತರ ಕೇವಲ 1 ಸಾವಿರ!
Advertisement
Advertisement
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದ ಎ.ಜಿ ಕೊಡ್ಗಿ ರಾಜಕೀಯಕ್ಕೆ ಕರೆದುಕೊಂಡು ಬಂದಿದ್ದರು. ಆರಂಭದ ಎರಡು ಅವಧಿಗಳಲ್ಲಿ ಹಾಲಾಡಿಯ ಗೆಲುವಿನ ಹಿಂದೆ ಕೊಡ್ಗಿ ಬೆಂಬಲ ಇತ್ತು. ಗುರುವಿನ ಋಣವನ್ನು ತೀರಿಸಲು ಎ ಜಿ ಕೊಡ್ಗಿ (AG Kodgi) ಅವರ ಪುತ್ರ ಕಿರಣ್ ಕೊಡ್ಗಿ ಅವರಿಗೆ ಈ ಬಾರಿ ಕುಂದಾಪುರದ ಟಿಕೆಟ್ ಕೊಡಿಸಿದ್ದರು. ಇದನ್ನೂ ಓದಿ: Karnataka Election 2023 Result – ಗೆಲುವಿನ ಖಾತೆ ತೆರೆದ ಬಿಜೆಪಿ LIVE Updates