ಬಿಜೆಪಿ ಸೋಲಿಗೆ ವ್ಯಂಗ್ಯವಾಡಿದ ಕಾಂಗ್ರೆಸ್ಸಿಗರಿಗೆ ಬಿ.ಎಲ್ ಸಂತೋಷ್ ಹೊಸ ಸವಾಲ್

Public TV
1 Min Read
BL SANTHOSH

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಹೀಗಾಗಿ ವ್ಯಂಗ್ಯವಾಡಿದ ಕಾಂಗ್ರೆಸ್ ನವರಿಗೆ ತಿರುಗೇಟು ನೀಡುವ ಮೂಲಕ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೊಸ ಸವಾಲೆಸೆದಿದ್ದಾರೆ.

ಈ ಸಂಬಂಧ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ಇನ್ನು 12 ತಿಂಗಳಿನೊಳಗೆ 31,000ಕ್ಕೆ ಮತ್ತೆ 10,000 ಸೇರಿಸಿ 41,000 ಬೂತ್‍ಗಳಲ್ಲಿ ಮುನ್ನಡೆ ಸಾಧಿಸಿ ತೋರಿಸುತ್ತೇವೆ ಎಂದು ಚಾಲೆಂಜ್ ಹಾಕಿದ್ದಾರೆ. ಇದನ್ನೂ ಓದಿ: ಸಿದ್ಧಾಂತದ ಸೋಲಲ್ಲ, ವೈಯಕ್ತಿಕ ಸೋಲು: ಸಿ.ಟಿ ರವಿ

ಫೇಸ್‌ಬುಕ್‌ ನಲ್ಲೇನಿದೆ..?: ಕಲಿಯುತ್ತೇವೆ, ಸೋಲಿನಿಂದ, ಹಿನ್ನಡೆಗಳಿಂದ, ತಪ್ಪುಗಳಿಂದ ಉತ್ತರಿಸುತ್ತೇವೆ. ಟೀಕೆಗಳಿಗೆ, ಕುಹಕಗಳಿಗೆ, ಒಡಕು ಮಾತುಗಳಿಗೆ ನಮ್ಮ ಗತಿಶೀಲತೆಯಿಂದ ನಾವು ಇರಲಿಕ್ಕೇ ಬಂದವರು, ಗೆಲ್ಲಲಿಕ್ಕೇ ಬಂದವರು. ನಮಗೆ ಸೋಲು ಕ್ಷಣಿಕ, ಮುನ್ನಡೆ ಸತತ. ಇನ್ನು 12 ತಿಂಗಳಿನೊಳಗೆ 31,000ಕ್ಕೆ ಮತ್ತೆ 10,000 ಸೇರಿಸಿ 41,000 ಬೂತ್‍ಗಳಲ್ಲಿ ಮುನ್ನಡೆ ಸಾಧಿಸಿ ತೋರಿಸುತ್ತೇವೆ ಎಂದು ಚಾಲೆಂಜ್ ಹಾಕಿದ್ದಾರೆ.

Share This Article