ರಾಮನಗರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಕಾಂಗ್ರೆಸ್ (Congress) ಭರ್ಜರಿ ಜಯಗಳಿಸಿದೆ. ಈ ಸಂಭ್ರಮದ ಗಳಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ತಮ್ಮ ಹಳೆಯ ನೋವನ್ನು ನೆನೆದು ಭಾವುಕರಾಗಿದ್ದಾರೆ.
ರಾಮನಗರದಲ್ಲಿ (Ramanagara) ಮಾತನಾಡಿದ ಡಿಕೆಶಿ, ಅಖಂಡ ಕರ್ನಾಟಕದ ಮಹಾಜನತೆಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಚಳವಾದ ಬಹುಮತ ನೀಡಿದ್ದಾರೆ ಎಂದು ಮತದಾರರಿಗೆ ಧನ್ಯವಾದ ತಿಳಿಸಿದರು.
Advertisement
Advertisement
ನಾನು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಭರವಸೆ ನೀಡಿದ್ದೆ. ಈ ಬಿಜೆಪಿ ಜನರು ನನ್ನನ್ನು ಹಿಂದೆ ಜೈಲಿಗಟ್ಟಿದ್ದರು. ನಾನು ಜೈಲಿನಲ್ಲಿದ್ದಾಗ ಸೋನಿಯಾ ಗಾಂಧಿ ನನ್ನನ್ನು ಜೈಲಿನಲ್ಲಿ ಭೇಟಿ ಮಾಡಲು ಬಂದಿದ್ದನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಡಿಕೆಶಿ ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತರು. ಇದನ್ನೂ ಓದಿ: ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್: ಶೋಭಾ ಕರಂದ್ಲಾಜೆ
Advertisement
ಒಗ್ಗಟ್ಟಿನಲ್ಲಿ ಕೆಲಸ ಮಾಡಿದರೆ ಮಾತ್ರ ಪ್ರಗತಿ, ಅದರಿಂದಲೇ ಗೆಲುವು ಎಂದು ನಾನು ಮೊದಲಿನಿಂದಲೂ ಹೇಳಿದ್ದೇನೆ. ಇಂದಿನ ಸಾಧನೆ ಒಬ್ಬರ ಪ್ರಯತ್ನವಲ್ಲ. ನಾನು ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಎಲ್ಲಾ ನಾಯಕರನ್ನು, ಶಾಸಕರನ್ನು, ಬೂತ್ ಮಟ್ಟದಲ್ಲಿ ಕೆಲಸ ಮಾಡಿದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದು ಡಿಕೆಶಿ ಹೇಳಿದರು. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ; ಸಿಎಂ ಸ್ಥಾನಕ್ಕೆ ಬೊಮ್ಮಾಯಿ ಇಂದು ರಾಜೀನಾಮೆ LIVE Updates