ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಯ ಫಲಿತಾಂಶ ಹೊರಬಿದ್ದಿದೆ. ರಾಜ್ಯದಲ್ಲಿ ಕಾಂಗ್ರೆಸ್ (Congress) ಗೆದ್ದು ಬೀಗಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಸೋಲಿನ ಹೊಣೆ ಹೊತ್ತಿರುವ ನಳಿನ್ ಕುಮಾರ್ ಕಟೀಲ್ ಸೋಮವಾರ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
ಹೌದು. ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ ಹಿನ್ನೆಲೆಯಲ್ಲಿ ಕಟೀಲ್ (Nalin Kumar Kateel) ನೈತಿಕ ಹೊಣೆ ಹೊತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ (ಸೋಮವಾರ) ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಕಟೀಲ್ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಿಜೆಪಿ ಸೋಲಿನ ಜವಾಬ್ದಾರಿ ನಾನೇ ಹೊರುತ್ತೇನೆ: ಬೊಮ್ಮಾಯಿ
Advertisement
ರಾಜೀನಾಮೆ ನೀಡೋ ಬಗ್ಗೆ ಕಟೀಲ್ ಈಗಾಗಲೇ ತನ್ನ ಆಪ್ತರಲ್ಲಿ ಹೇಳಿಕೊಂಡಿದ್ದಾರೆ ಎಂಬ ಮಾಹಿತಿ ಕೂಡ ಸಿಕ್ಕಿದೆ. 2019 ರ ಆಗಸ್ಟ್ 20 ರಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಅವರ ಸ್ಥಾನಕ್ಕೆ ಕಟೀಲ್ ರನ್ನು ಕರ್ನಾಟಕ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಬಿಜೆಪಿಗೆ 6ರಲ್ಲಿ ಜಯ – 2ರಲ್ಲಿ ಕಾಂಗ್ರೆಸ್ ಗೆಲುವು