ಹಾಸನ: ಹಾಸನದಲ್ಲಿ ಪ್ರೀತಂ ಗೌಡ (Preetham Gowda) ಹಾಗೂ ಸ್ವರೂಪ್ ಪ್ರಕಾಶ್ (Swaroop Prakash) ನಡುವೆ ಜಿದ್ದಾ ಜಿದ್ದಿ ನಡೆದಿದ್ದು, ಇದೀಗ ಸ್ವರೂಪ್ 70,080 ಮತಗಳನ್ನು ಪಡೆಯುವ ಮೂಲಕ ಗೆಲುವಿನ ಜಯಭೇರಿಯನ್ನು ಭಾರಿಸಿದ್ದಾರೆ.
ಸ್ವರೂಪ್ ಪ್ರಕಾಶ್ ಜನತಾ ದಳ ಪಕ್ಷದಿಂದ ಸ್ಪರ್ಧಿಸಿದ್ದು, ಅವರ ವಿರುದ್ಧವಾಗಿ ಪ್ರೀತಂ ಗೌಡ ಬಿಜೆಪಿಯಿಂದ (BJP) ಕಣಕ್ಕೆ ಇಳಿದಿದ್ದರು. ಇಬ್ಬರ ನಡುವೆ ಭಾರೀ ಪೈಪೋಟಿ ನಡೆದಿತ್ತು. ಕೊನೆಗೂ ಪ್ರೀತಂ ವಿರುದ್ಧ ಸ್ವರೂಪ್ 6,773 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಚುನಾವಣೆಯಲ್ಲಿ (Election) ಗೆದ್ದ ಹಿನ್ನೆಲೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು (H.D.Deve Gowda) ಫೋನ್ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ದೇವೇಗೌಡರು ಕರೆ ಮಾಡಿದ ಸಂದರ್ಭದಲ್ಲಿ ಸ್ವರೂಪ್ ಮತ ಎಣಿಕೆ ಕೇಂದ್ರದಲ್ಲಿ ಇದ್ದುದ್ದರಿಂದ ದೇವೇಗೌಡರನ್ನು ಭಾನುವಾರ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೋಲಿನ ಹೊಣೆಹೊತ್ತ ರಾಜ್ಯಾಧ್ಯಕ್ಷ ಕಟೀಲ್
Advertisement
Advertisement
ಇನ್ನೂ ಹಾಸನ (Hassan) ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಸ್ವರೂಪ್ ಪತ್ನಿ ಡಾ.ಶ್ವೇತಾ ಪತಿಯನ್ನು ಅಪ್ಪಿ ಕಣ್ಣೀರಿಟ್ಟು ಶುಭಾಶಯಗಳನ್ನು ತಿಳಿಸಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಭವಾನಿ ರೇವಣ್ಣ ನಿಲ್ಲುವ ಇಂಗಿತ ವ್ಯಕ್ತಪಡಿಸಿದ್ದರು. ಇದೇ ವಿಚಾರ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣ ಮಧ್ಯೆ ತಿಕ್ಕಾಟಕ್ಕೂ ಕಾರಣವಾಗಿತ್ತು. ಕೊನೆ ಕ್ಷಣದಲ್ಲಿ ಭವಾನಿಗೆ ಟಿಕೆಟ್ ನಿರಾಕರಿಸಿ, ಸ್ವರೂಪ್ ಪ್ರಕಾಶ್‌ಗೆ ಕುಮಾರಸ್ವಾಮಿ ಟಿಕೆಟ್ ನೀಡಿದ್ದರು. ರೇವಣ್ಣ ಕುಟುಂಬದ ಯಾರೇ ಸ್ಪರ್ಧಿಸಿದರೂ, 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದಾಗಿ ಸವಾಲು ಹಾಕಿದ್ದ ಪ್ರೀತಂ ಗೌಡ ಸೋಲನ್ನು ಅನುಭವಿಸಿದ್ದಾರೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್ 135, ಬಿಜೆಪಿ 65, ಜೆಡಿಎಸ್ 20 ಮುನ್ನಡೆ LIVE Updates
Advertisement