– ರವಿ ಸೋಲಿಗೆ ಅವರ ನಾಲಿಗೆಯೇ ಕಾರಣ
ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಯವರನ್ನು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿದ್ದಕ್ಕೆ ಭೋಜೇಗೌಡರಿಗೆ ಹಾಲಿನ ಅಭಿಷೇಕ ನಡೆಸಲಾಯಿತು.
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಪರಮಾಪ್ತ ಭೋಜೇಗೌಡ, ಜೆಡಿಎಸ್ ಅಭ್ಯರ್ಥಿ ಇದ್ದರೂ ಸಿ.ಟಿ ರವಿ ವಿರುದ್ಧ ಭೋಜೇಗೌಡ (Bhoje Gowda) ಅಖಾಡಕ್ಕಿಳಿದಿದ್ದರು. ಈ ಮೂಲಕ ಸಿ.ಟಿ.ರವಿ ಸೋಲಿನ ಮಾಸ್ಟರ್ ಮೈಂಡ್ ಆಗಿದ್ದಾರೆ. ಹೀಗಾಗಿ ಜೆ.ಡಿ.ಎಸ್ ಕಾರ್ಯಕರ್ತರು ಭೋಜೇಗೌಡರಿಗೆ ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆಯಲ್ಲಿ ಸನ್ಮಾನ ಹಾಗೂ ಅಭಿಷೇಕ ಮಾಡಿದ್ದಾರೆ. ಕಾಂಗ್ರೆಸ್ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದ ಭೋಜೇಗೌಡ, ಜೆಡಿಎಸ್ ನಿಂದ ಗೆದ್ದು ಕಾಂಗ್ರೆಸ್ಸಿನ ತಮ್ಮಯ್ಯ ಪರ ಮತಯಾಚಿಸಿದ್ದರು. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ 5 ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಜಯ – ಬಿಜೆಪಿಗೆ ಹೀನಾಯ ಸೋಲು
Advertisement
Advertisement
ಬಳಿಕ ಸಿ.ಟಿ.ರವಿ ಬುದ್ಧಿವಂತರಿದ್ದಾರೆ ಎಂದು ಹಾಡಿ ಹೊಗಳಿದ ಭೋಜೇಗೌಡ, ಸಿ.ಟಿ.ರವಿ ಬಹಳ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಆಗಿದ್ದರು. ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುವ ಯೋಗವೂ ಲಭಿಸಿತ್ತು. ಟೀಕೆಗಳು ತಪ್ಪಲ್ಲ, ಆದರೆ ಅದಕ್ಕೊಂದು ಇತಿಮಿತಿ ಇರುತಿತ್ತು. ರಾಜಕೀಯ ಅಸ್ತ್ರದ ಟೀಕೆ ಸರಿ, ವೈಯಕ್ತಿಕ ಟೀಕೆ ಸರಿಯಲ್ಲ. ಸಿ.ಟಿ ರವಿ ಸದನದ ಒಳಗೆ-ಹೊರಗೆ ಎರಡೂ ಕಡೆ ವೈಯಕ್ತಿಕ ಟೀಕೆ ಮಾಡಿದ್ದಾರೆ. ಟೀಕೆ ಮಾಡುವಾಗ ವ್ಯಕ್ತಿತ್ವ, ರಾಜಕೀಯ ಮುತ್ಸದ್ದಿತನವನ್ನ ಯೋಚನೆ ಮಾಡಬೇಕು ಎಂದರು.
Advertisement
ಯಾರನ್ನೋ ಮೆಚ್ಚಿಸಲು, ಕ್ಷಣಿಕ ಸುಖಕ್ಕೆ, ಕಾರ್ಯಕರ್ತರ ಮೆಚ್ಚಿಸಲು ವೈಯಕ್ತಿಕ ಟೀಕೆ ಸರಿಯಲ್ಲ. ದೇವೇಗೌಡ (HD Devegowda) ರಿಗೆ ಸಾಬರಾಗಿ ಹುಟ್ಲಿ ಅನ್ನೋದು, ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಅನ್ನೋದು. ಸಿ.ಟಿ.ರವಿ ಯಾರನ್ನ ಬಿಟ್ಡಿದ್ದಾರೆ. ಯಾರನ್ನೂ ಬಿಟ್ಟಿಲ್ಲ. ಟೀಕೆ ಮಾಡುವಾಗಲು ರಾಜಕೀಯ ಸ್ಟ್ಯಾಂಡರ್ಡ್ ನಲ್ಲಿ ಟೀಕೆ ಮಾಡಬೇಕು. ಕುಲದ ಕುತ್ತಿಗೆ ಉದ್ದ ಸರ್… ಅಷ್ಟು ಸುಲಭ ಇಲ್ಲ. ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್. ಕುಲದ ಬಗ್ಗೆ ಮಾತನಾಡುವಾಗ ಜನ ಆತನ ಹಮ್ಮಿನ ಬಗ್ಗೆ ಯೋಚಿಸ್ತಾರೆ ಎಂದು ಹೇಳಿದರು.
Advertisement
ಸಿ.ಟಿ.ರವಿ ಸೋಲಿಗೆ ಅವರ ನಾಲಿಗೆಯೇ ಕಾರಣ. ದುರಾಡಳಿತ, ದುರಾಂಕಾರ, ನಾಲಿಗೆ ಎಲ್ಲವೂ ಸೇರಿ ಕೂಡಿ ಸೋಲಿಸಿವೆ ಎಂದು ತಿಳಿಸಿದರು. ಇದನ್ನೂ ಓದಿ: ಸೋತಿರೋದಕ್ಕೆ ಕುಂಟು ನೆಪ ಹೇಳೋದು ಸರಿಯಲ್ಲ: ಕೈ ನಾಯಕರಿಗೆ ಸೂರ್ಯ ತಿರುಗೇಟು