ಫಲಿತಾಂಶಕ್ಕೂ ಮೊದಲೇ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮ

Public TV
1 Min Read
congress delhi office

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Election) ಮತ ಏಣಿಕೆ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಡೋಲು ಬಾರಿಸಿ ಸಂಭ್ರಮಿಸಲಾಯಿತು.

ಇಂದು ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಏಣಿಕೆ ಪ್ರಾರಂಭವಾಗಿದೆ. 2023ರ ಕರ್ನಾಟಕ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗುತ್ತಲೇ ದೆಹಲಿಯ (New Delhi) ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಡ್ರಮ್ ಬಾರಿಸಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 115, ಬಿಜೆಪಿ 77, ಜೆಡಿಎಸ್‌ 27 ಮುನ್ನಡೆ LIVE Updates

ಕರ್ನಾಟಕ ವಿಧಾನಸಭಾ ಚುನಾವಣೆ ಮೇ 9ರಂದು ನಡೆದಿತ್ತು. ಈಗಾಗಲೇ ಮತ ಏಣಿಕೆ ಆರಂಭವಾಗಿದೆ. ಆರಂಭಿಕ ಟ್ರೆಂಡ್‌ ಪ್ರಕಾರ  ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಕಾಂಗ್ರೆಸ್‌ (Congress) ಕಚೇರಿಯಲ್ಲೂ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಇದನ್ನೂ ಓದಿ: ಗೆಲುವಿನ ನಿರೀಕ್ಷೆ – ರಿಲ್ಯಾಕ್ಸ್ ಆಗಿ ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ಯುಟಿ ಖಾದರ್

Share This Article