ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಯ (Election) ಫಲಿತಾಂಶ (Result) ಪ್ರಕಟವಾದ ಬೆನ್ನಲ್ಲೇ ಬೆಳಗಾವಿಯಲ್ಲಿ (Belagavi) ಕಿಡಿಗೇಡಿಗಳು ಪಾಕ್ ಪರ ಘೋಷಣೆ ಕೂಗಿದ ಘಟನೆ ನಡೆದಿದೆ.
ಬೆಳಗಾವಿಯ ಆರ್‌ಪಿಡಿ ವೃತ್ತದಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ ಸೇಠ್ ಗೆಲುವಿನ ಸಂಭ್ರಮದಲ್ಲಿ ಪಾಲ್ಗೊಂಡ ಕೆಲ ಕಿಡಿಗೇಡಿಗಳು ಪಾಕ್ ಪರ ಘೋಷಣೆ ಕೂಗಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಖರ್ಗೆ ತವರಲ್ಲಿ ಮೋದಿ ಕಮಾಲ್ ವ್ಯರ್ಥ – 7 ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಜಯ
ವೀಡಿಯೋದಲ್ಲಿ ಕಿಡಿಗೇಡಿಗಳು ಪೊಲೀಸರ ಎದುರೇ ಪಾಕ್ ಪರ ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲದೇ ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಕುಣಿದರು. ಘಟನೆಗೆ ಸಂಬಂಧಿಸಿ ವೈರಲ್ ಆದ ವಿಡಿಯೋ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕಾಂಗ್ರೆಸ್ ಗೆದ್ದಿದ್ದು 136 ಅಲ್ಲ, 138 ಸೀಟು: ಸುರ್ಜೆವಾಲಾ