ತುಮಕೂರು: ನಾನು ಸೋತು ಸಿದ್ದರಾಮಯ್ಯರಿಗೆ (Siddaramaiah) ಸಹಕಾರ ಕೊಟ್ಟಿದ್ದೇನೆ. ಅವರೂ ಸಹಕಾರ ಕೊಡುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.
ಅಜ್ಜಯ್ಯನ ದರ್ಶನದ ಬಳಿಕ ಮಾತನಾಡಿದ ಅವರು, ಕೆಲವರು ನನಗೆ ಸಿದ್ದರಾಮಯ್ಯರ ನಡುವೆ ವ್ಯತ್ಯಾಸ ಇದೆ ಎಂದರು. ಆದರೆ ನಮ್ಮಿಬ್ಬಿರ ನಡುವೆ ವ್ಯತ್ಯಾಸ ಇಲ್ಲ. ಹಲವು ಬಾರಿ ಪಕ್ಷದ ವಿಚಾರದಲ್ಲಿ ನಾನು ಸೋತಿದ್ದೇನೆ. ಆರಂಭದಲ್ಲಿ ನನ್ನನ್ನು ಮಂತ್ರಿ ಮಾಡದೇ ಇದ್ದಾಗ ನಾನು ತಾಳ್ಮೆಯಿಂದ ಇರಲಿಲ್ವಾ. ಸಿದ್ದರಾಮಯ್ಯರಿಗೆ ನಾನು ಸಾಕಾರ ಕೊಟ್ಟಿದ್ದೇನೆ ಎನ್ನುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ಅವರು ತಮಗೆ ಅವಕಾಶ ಕಲ್ಪಿಸಿಕೊಡುವಂತೆ ಹೇಳಿದರು.
Advertisement
Advertisement
ನನಗೆ ಮಾನಸಿಕವಾಗಿ ಧೈರ್ಯ ಕೊಟ್ಟವರು ಅಜ್ಜಯ್ಯನವ್ರು. ನಾನು 134 ಸೀಟು ಕೇಳ್ಕೊಂಡಿದ್ದೆ. ಯಾರ ಹಂಗಿನಲ್ಲೂ ನಾವು ಅಧಿಕಾರ ಮಾಡ್ಬಾರ್ದು ಅಂತಾ ಬೇಡ್ಕೊಂಡಿದ್ದೆ. ನಾನು ಅಧಿಕಾರ ಹಿಡಿದಾಗಲೇ, ಹೆಣ್ಣು ಮಕ್ಕಳ ಬಗ್ಗೆ ಹೆಚ್ಚು ಚಿಂತನೆ ಮಾಡ್ಬೇಕು ಅನ್ನೋ ಮಾರ್ಗದರ್ಶನ ಬಂದಿತ್ತು. ಹೀಗಾಗಿಯೇ ನಾವು ಗೃಹಲಕ್ಷ್ಮೀ, ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ಕೊಡೋ ಯೋಜನೆ ಮಾಡಿದೆವು ಎಂದು ತಿಳಿಸಿದರು.
Advertisement
ತಮಗೆಲ್ಲ ಗೊತ್ತಿದೆ, ಈ ಮಠ ನನಗೆ ಪುಣ್ಯ ದೈವ ಕ್ಷೇತ್ರ. ನನಗೆ ಪ್ರತಿಯೊಂದು ಸಂದರ್ಭದಲ್ಲಿ ಕೂಡ ಗಂಗಾಧರ ಅಜ್ಜ, ಇಲ್ಲಿಯ ಸ್ವಾಮೀಜಿ ನನಗೆ ಮಾರ್ಗದರ್ಶನ ಮಾಡಿದ್ದಾರೆ. ನಾನು ಅಧಿಕಾರ ತೆಗೆದುಕೊಂಡಾಗಿನಿಂದಲೂ, ಯಾರಿಗೆ ಟಿಕೆಟ್ ಕೊಡ್ಬೇಕು, ಯಾರಿಗೆ ಕೊಡ್ಬಾರ್ದು ಅನ್ನೋದನ್ನ ಇಲ್ಲೇ ಮಾರ್ಗದರ್ಶನ ಪಡೆದು ನಿರ್ಧಾರ ಮಾಡಿದ್ದೇನೆ. ನನಗೆ ಸಂಪೂರ್ಣವಾದ ಮಾರ್ಗದರ್ಶನ ಕೊಟ್ಟಿದ್ದಾರೆ. ಆದಾಯ ತೆರಿಗೆ, ಐಟಿ ರೇಡ್ ಆದಾಗಲೂ ನಾನು ಅಜ್ಜಯ್ಯನ ಮಾರ್ಗದರ್ಶನ ಪಡೆದಿದ್ದೆ. ಹೆಲಿಕಾಪ್ಟರ್ ದುರಂತ ಆದ ನಂತರ ಕೂಡ ನನ್ನ ಮಗಳು ಇಲ್ಲಿಗೆ ಬಂದು ಹೋದಳು ಎಂದರು.
Advertisement
ಇವತ್ತು ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ ಇಲ್ಲಿ ಬಂದಿದ್ದಾರೆ. ಅವರಿಗೆ ಒಂದು ಆತಂಕ ಇತ್ತು. ಮಂಡ್ಯದಲ್ಲಿ ಏನಾಗುತ್ತೋ ಏನೋ ಅನ್ನೋ ಆತಂಕ ಇತ್ತು. ಅವರಿಗೆ ಕೂಡ ಧೈರ್ಯ ತುಂಬಿದೆ. ಈಗ ಮಂಡ್ಯದಲ್ಲಿ ಕಾಂಗ್ರೆಸ್‍ಗೆ ಗೆಲುವಾಗಿದೆ. ಇದು ಮಂಡ್ಯ ಜನತೆಯ ಗೆಲುವು. ನಾಮಿನೇಷನ್ ಹಾಕುವಾಗಲು ಅಜ್ಜನ ನೆನಸಿಕೊಂಡು ಹಾಕಿದ್ದೆ ಎಂದು ಹೇಳಿದರು.
ರಾಜ್ಯದ ಚುನಾವಣಾ ಫಲಿತಾಂಶ ಬಂದಮೇಲೆ ಮೊದಲು ಇಲ್ಲಿಗೆ ಬಂದಿದ್ದೇನೆ. ಗುರಿ ತಲುಪಬೇಕಾದ್ರೆ ಗುರು ಮಾರ್ಗದರ್ಶನ ಬೇಕಾಗುತ್ತೆ. ಗುರು ಮಾರ್ಗದರ್ಶನ ದಲ್ಲಿ ನಾವೆಲ್ಲರೂ ನಡೆಯುತ್ತಾ ಇದ್ದೇವೆ. ಅವರು ಏನೇ ಹೇಳಿದ್ರು ನಾವು ಕೇಳ್ತಿವಿ. ನಾವು ಅವರನ್ನ ನಂಬಿ ಬಂದಿದ್ದೀವಿ. ಏನೇನು ಕೇಳಿದ್ದೀನಿ ಎಲ್ಲಾ ಕೊಟ್ಟಿದ್ದಾರೆ. ನಾನು ಪಕ್ಷಕ್ಕೆ ಜವಾಬ್ದಾರಿಯುತವಾಗಿ ನಡೆದುಕೊಂಡಿದ್ದೇನೆ. ದಿನೇಶ್ ಗುಂಡೂರಾವ್ ಅವ್ರು ನೈತಿಕ ರಾಜೀನಾಮೆ ಕೊಟ್ಟಾಗ, ಸೋನಿಯಾ ಗಾಂಧಿ ಅವರು ನನ್ನ ಹೆಗಲಿಗೆ ಜವಾಬ್ದಾರಿ ಹೊರೆಸಿದ್ರು. ನಾನು ಜೈಲಿಂದ ಹೊರಬರುತ್ತಲೇ ಅಧಿಕಾರ ಹಿಡಿದೆ. ಹಗಲು ರಾತ್ರಿ ದುಡಿದಿದ್ದೇನೆ ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್‍ನಿಂದ ಹನುಮಾನ್ ದೇವರಿಗೆ ವಿಶೇಷ ಪೂಜೆ
ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರು, ಸ್ಥಳೀಯ ಶಾಸಕರು, ಬೇಳೂರು ಗೋಪಾಲಕೃಷ್ಣ ಕೂಡ ಇಲ್ಲಿ ಬಂದಿದ್ದಾರೆ. ಎಲ್ಲರೂ ಅವರವರಾಗಿಯೇ ಬಂದಿದ್ದಾರೆ. ಸಿಎಂ ಯಾರು ಅನ್ನೋದು ಸಿಎಲ್‍ಪಿಯಲ್ಲಿ ನಿರ್ಧಾರ ಆಗುತ್ತದೆ. ಅಜ್ಜಯ್ಯನ ಆಶೀರ್ವಾದದಿಂದ ಇನ್ನೂ ಎತ್ತರಕ್ಕೆ ಏರುತ್ತೇನೆ ಎಂಬ ನಂಬಿಕೆ ಇದೆ. ನೋಡೋಣ, ಆಗ್ತೀನಿ ಅನ್ನೋ ನಂಬಿಕೆ ನನಗಿದೆ ಎನ್ನುವ ಮೂಲಕ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಎಂ ಕುರ್ಚಿ ಫೈಟ್; 50-50 ಪ್ಲಾನ್ ಡಿಕೆಶಿ ಮುಂದಿಡ್ತಾರಾ ಸಿದ್ದು?