ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ತವರು ಕ್ಷೇತ್ರ ಹಾವೇರಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಸಿಎಂ ತವರು ಕ್ಷೇತ್ರದಲ್ಲೇ ಬಿಜೆಪಿಗೆ (BJP) ಭರ್ಜರಿ ಹಿನ್ನಡೆಯಾಗಿದೆ. ಬಿಜೆಪಿ ಕೇವಲ ಒಂದರಲ್ಲಿ ಗೆಲುವು ಸಾಧಿಸಿದ್ದು, 5 ಕ್ಷೇತ್ರದಲ್ಲಿ ಭರ್ಜರಿ ಕಾಂಗ್ರೆಸ್ (Congress) ಗೆಲುವು ಸಾಧಿಸಿದೆ.
ಹಾವೇರಿ: ಕಾಂಗ್ರೆಸ್ ಅಭ್ಯರ್ಥಿಯಾಗಿ ರುದ್ರಪ್ಪ ಲಮಾಣಿ ಈ ಬಾರಿ ಜಯ ಸಾಧಿಸಿದ್ದಾರೆ. ಹಾವೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರುದ್ರಪ್ಪ ಲಮಾಣಿ, ಬಿಜೆಪಿ ಅಭ್ಯರ್ಥಿಯಾಗಿ ಗವಿಸಿದ್ದಪ್ಪ ದ್ಯಾಮಣ್ಣನವರ್, ಜೆಡಿಎಸ್ ಅಭ್ಯರ್ಥಿಯಾಗಿ ತುಕಾರಾಂ ಮಾಳಗಿ ಸ್ಪರ್ಧಿಸಿದ್ದರು.
Advertisement
Advertisement
ಶಿಗ್ಗಾಂವಿ: ಬಿಜೆಪಿ ಅಭ್ಯರ್ಥಿಯಾದ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರಖಾನ್ ಪಠಾಣ್, ಜೆಡಿಎಸ್ ಅಭ್ಯರ್ಥಿಯಾಗಿ ಶಶಿಧರ ಎಲಿಗಾರ ಸ್ಪರ್ಧಿಸಿದ್ದರು.
Advertisement
Advertisement
ಹಾನಗಲ್: ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಹಾನಗಲ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀನಿವಾಸ ಮಾನೆ, ಬಿಜೆಪಿ ಅಭ್ಯರ್ಥಿಯಾಗಿ ಶಿವರಾಜ್ ಸಜ್ಜನ್, ಜೆಡಿಎಸ್ ಅಭ್ಯರ್ಥಿಯಾಗಿ ಮನೋಹರ ತಹಶಿಲ್ದಾರ ಸ್ಪರ್ಧಿಸಿದ್ದರು.
ಹಿರೇಕೆರೂರು: ಕಾಂಗ್ರೆಸ್ ಅಭ್ಯರ್ಥಿಯಾಗಿ ಯುಬಿ ಬಣಕಾರಗೆ ಜಯಭೇರಿ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿಯಾದ ಸಚಿವ ಬಿ.ಸಿ ಪಾಟೀಲ್ ಹೀನಾಯ ಸೋಲನುಭವಿಸಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ.ಸಿ ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಯುಬಿ ಬಣಕಾರ, ಜೆಡಿಎಸ್ ಅಭ್ಯರ್ಥಿಯಾಗಿ ಜಯಾನಂದ ಜಾವಣ್ಣನವರ್ ಸ್ಪರ್ಧಿಸಿದ್ದರು.
ರಾಣೇಬೆನ್ನೂರು: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಕಾಶ್ ಕೋಳಿವಾಡ ಗೆಲುವು ಸಾಧಿಸಿದ್ದಾರೆ. ರಾಣೇಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅರುಣ್‍ಕುಮಾರ್ ಪೂಜಾರ, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಕಾಶ್ ಕೋಳಿವಾಡ, ಜೆಡಿಎಸ್ ಅಭ್ಯರ್ಥಿಯಾಗಿ ಮಂಜುನಾಥಗೌಡ ಶಿವಣ್ಣನವರ್, ಎನ್‍ಸಿಪಿ ಅಭ್ಯರ್ಥಿಯಾಗಿ ಆರ್.ಶಂಕರ್ ಸ್ಪರ್ಧಿಸಿದ್ದರು. ಇದನ್ನೂ ಓದಿ: ಹಾಸನದಲ್ಲಿ ಪ್ರೀತಂ ಗೌಡಗೆ ಸೋಲು – ಜಿಲ್ಲೆಯಲ್ಲಿ 2 ಸ್ಥಾನ ಗೆದ್ದ ಬಿಜೆಪಿ
ಬ್ಯಾಡಗಿ: ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರಾಜ್ ಶಿವಣ್ಣನವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬ್ಯಾಡಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿರೂಪಾಕ್ಷಪ್ಪ ಬಳ್ಳಾರಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರಾಜ್ ಶಿವಣ್ಣನವರ್ ಸ್ಪರ್ಧಿಸಿದ್ದರು. ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಯಾರಿಗೆ ಗೆಲುವು? ಯಾರಿಗೆ ಸೋಲು?