ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ತವರಿನಲ್ಲಿ ಈ ಬಾರಿ ಮೋದಿ ಕಮಾಲ್ ವ್ಯರ್ಥವಾಗಿದೆ. ಕಾಂಗ್ರೆಸ್ (Congress) ಭರ್ಜರಿ ಜಯಭೇರಿ ಬಾರಿಸಿ, ಬಿಜೆಪಿ (BJP) ಮುಖಭಂಗ ಅನುಭವಿಸಿದೆ. 9 ಕ್ಷೇತ್ರದಲ್ಲಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕೇವಲ 2 ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ.
ಆಳಂದ: ಕಾಂಗ್ರೆಸ್ ಅಭ್ಯರ್ಥಿ ಬಿಆರ್. ಪಾಟೀಲ್ ಗೆಲುವು ಸಾಧಿಸಿದ್ದು, ಬಿಜೆಪಿಯ ಸುಭಾಶ್ ಗುತ್ತೇದಾರ್ ಸೋಲನುಭವಿಸಿದ್ದಾರೆ.
Advertisement
Advertisement
ಅಫಜಲಪುರ್: ಕಾಂಗ್ರೆಸ್ ಅಭ್ಯರ್ಥಿ ಎಂ.ವೈ ಪಾಟೀಲ್‍ಗೆ ಜಯಭೇರಿ ಭಾರಿಸಿದ್ದಾರೆ. ಬಿಜೆಪಿಯ ಮಾಲೀಕಯ್ಯ ಗುತ್ತೇದಾರ, ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಗುತ್ತೇದಾರ್ ಸ್ಪರ್ಧಿಸಿದ್ದರು.
Advertisement
ಜೇವರ್ಗಿ: ಕಾಂಗ್ರೆಸ್ ಅಭ್ಯರ್ಥಿ ಅಜಯಸಿಂಗ್‍ಗೆ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಶಿವರಾಜ್ ರದ್ದೆವಾಡಗಿ, ಜೆಡಿಎಸ್ ಅಭ್ಯರ್ಥಿಯಾಗಿ ದೊಡಪ್ಪಗೌಡ ಪಾಟೀಲ್ ನರಿಬೋಳ ಸ್ಪರ್ಧಿಸಿದ್ದರು.
Advertisement
ಸೇಡಂ: ಕಾಂಗ್ರೆಸ್ ಅಭ್ಯರ್ಥಿ ಡಾ. ಶರಣಪ್ರಕಾಶ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ರಾಜಕುಮಾರ್ ತೇಲ್ಕೂರ್, ಜೆಡಿಎಸ್ ಅಭ್ಯರ್ಥಿಯಾಗಿ ಬಾಲರಾಜ್ ಗುತ್ತೇದಾರ ಸ್ಪರ್ಧಿಸಿದ್ದರು.
ಚಿತ್ತಾಪುರ: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆಗೆ ಗೆಲುವು ಸಾಧಿಸಿದ್ದು, ಇವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಮಣಿಕಂಠ್ ರಾಠೋಡ್ ಕಣಕ್ಕಿಳಿದಿದ್ದರು.
ಚಿಂಚೋಳಿ: ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸುಭಾಶ್ ರಾಠೋಡ್ ಸ್ಪರ್ಧಿಸಿದ್ದರು.
ಕಲಬುರಗಿ ಗ್ರಾಮೀಣ: ಬಿಜೆಪಿ ಅಭ್ಯರ್ಥಿ ಬಸವರಾಜ್ ಮತ್ತಿಮೂಡ್ ಜಯ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ರೇವುನಾಯಕ ಬೆಳಮಗಿ ಪರಾಭವಗೊಂಡರು.
ಕಲಬುರಗಿ ದಕ್ಷಿಣ: ಕಾಂಗ್ರೆಸ್ ಅಭ್ಯರ್ಥಿ ಅಲ್ಲಮ ಪ್ರಭು ಪಾಟೀಲ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ದತ್ತಾತ್ರೇಯ್ ಪಾಟೀಲ್ ಸ್ಪರ್ಧಿಸಿದ್ದರು. ಇದನ್ನೂ ಓದಿ: ಯಾವ ಭಾಗದಲ್ಲಿ ಯಾರಿಗೆ ಎಷ್ಟು ಸೀಟ್? 2018ರಲ್ಲಿ ಎಷ್ಟಿತ್ತು?
ಕಲಬುರಗಿ ಉತ್ತರ: ಕಾಂಗ್ರೆಸ್ ಅಭ್ಯರ್ಥಿ ಕನಿಜ್ ಫಾತಿಮಾ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಚಂದು ಪಾಟೀಲ್, ಜೆಡಿಎಸ್ ಅಭ್ಯರ್ಥಿಯಾಗಿ ನಾಸಿರ್ ಹುಸೇನ್ ಸ್ಪರ್ಧಿಸಿದ್ದರು. ಇದನ್ನೂ ಓದಿ: ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ – 5 ಕ್ಷೇತ್ರಗಳಲ್ಲಿ ಕ್ಲೀನ್ ಸ್ವಿಪ್