ಕೋಲಾರ: ಕೋಲಾರ (Kolar) ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರವಿದ್ದು, ಈ ಬಾರಿ 4 ಕಾಂಗ್ರೆಸ್ (Congress), 2 ಜೆಡಿಎಸ್ (JDS) ಗೆಲುವು ಸಾಧಿಸಿದ್ದು, ಬಿಜೆಪಿ (BJP) ಕೋಲಾರದಲ್ಲಿ ಖಾತೆ ತೆರೆಯಲು ವಿಫಲವಾಗಿದೆ.
ಕೋಲಾರ: ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್ ಗೆಲುವು ಸಾಧಿಸಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೊತ್ತೂರು ಮಂಜುನಾಥ್, ಜೆಡಿಎಸ್ ಅಭ್ಯರ್ಥಿಯಾಗಿ ಸಿಎಂಆರ್ ಶ್ರೀನಾಥ್, ಬಿಜೆಪಿ ಅಭ್ಯರ್ಥಿಯಾಗಿ ವರ್ತೂರ್ ಪ್ರಕಾಶ್ ಸ್ಪರ್ಧಿಸಿದ್ದರು.
Advertisement
Advertisement
ಶ್ರೀನಿವಾಸಪುರ: ಜೆಡಿಎಸ್ ಅಭ್ಯರ್ಥಿಯಾದ ವೆಂಕಟಶಿವಾರೆಡ್ಡಿ ಗೆಲುವು ಸಾಧಿಸಿದ್ದಾರೆ. ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಹೀನಾಯ ಸೋಲನುಭವಿಸಿದ್ದಾರೆ. ಶ್ರೀನಿವಾಸಪುರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ವೆಂಕಟಶಿವಾರೆಡ್ಡಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ರಮೇಶ್ ಕುಮಾರ್, ಬಿಜೆಪಿ ಅಭ್ಯರ್ಥಿಯಾಗಿ ಗುಂಜೂರು ಶ್ರೀನಿವಾಸರೆಡ್ಡಿ ಸ್ಪರ್ಧಿಸಿದ್ದರು.
Advertisement
Advertisement
ಬಂಗಾರಪೇಟೆ: ಕಾಂಗ್ರೆಸ್ ಅಭ್ಯರ್ಥಿಯಾದ ಹಾಲಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಜಯ ಸಾಧಿಸಿದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್.ಎನ್.ನಾರಾಯಣಸ್ವಾಮಿ, ಜೆಡಿಎಸ್ ಅಭ್ಯರ್ಥಿಯಾಗಿ ಮಲ್ಲೇಶ್ ಬಾಬು, ಬಿಜೆಪಿ ಅಭ್ಯರ್ಥಿಯಾಗಿ ಎಂ.ನಾರಾಯಣಸ್ವಾಮಿ ಸ್ಪರ್ಧಿಸಿದ್ದರು.
ಕೆಜಿಎಫ್: ಹಾಲಿ ಶಾಸಕಿ ಕಾಂಗ್ರೆಸ್ ಅಭ್ಯರ್ಥಿ ರೂಪಕಲಾ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕೆಜಿಎಫ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರೂಪಕಲಾ, ಬಿಜೆಪಿ ಅಭ್ಯರ್ಥಿಯಾಗಿ ಅಶ್ವಿನಿ ಸಂಪಂಗಿ ಜೆಡಿಎಸ್ ಅಭ್ಯರ್ಥಿಯಾಗಿ ರಮೇಶ್ ಬಾಬು, ಆರ್.ಪಿ.ಐ ಅಭ್ಯರ್ಥಿಯಾಗಿ ರಾಜೇಂದ್ರನ್ ಸ್ಪರ್ಧಿಸಿದ್ದರು.
ಮುಳಬಾಗಿಲು: ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಗೆಲುವು ಸಾಧಿಸಿದ್ದಾರೆ. ಮುಳಬಾಗಿಲು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸಮೃದ್ದಿ ಮಂಜುನಾಥ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಆದಿನಾರಾಯಣ್, ಬಿಜೆಪಿ ಅಭ್ಯರ್ಥಿಯಾಗಿ ಶೀಗೇಹಳ್ಳಿ ಸುಂದರ್ ಸ್ಪರ್ಧಿದ್ದರು. ಇದನ್ನೂ ಓದಿ: ಚುನಾವಣಾ ಅಖಾಡದಲ್ಲಿ ಅಪ್ಪ-ಮಕ್ಕಳು : ಗೆದ್ದೋರು ಯಾರು? ಸೋತವರು ಯಾರು?
ಮಾಲೂರು: ಹಾಲಿ ಶಾಸಕರಾದ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ ಗೆಲುವು ಸಾಧಿಸಿದ್ದಾರೆ. ಮಾಲೂರು ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ನಂಜೇಗೌಡ, ಬಿಜೆಪಿಯಿಂದ ಮಂಜುನಾಥ ಗೌಡ, ಪಕ್ಷೇತರ ಅಭ್ಯರ್ಥಿಯಾಗಿ ಹೂಡಿ ವಿಜಯ್ ಕುಮಾರ್ ಸ್ಪರ್ಧಿಸಿದ್ದರು. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಬಿಜೆಪಿಗೆ ಶಾಕ್ – ಕಾಂಗ್ರೆಸ್‍ಗೆ 4 ಕ್ಷೇತ್ರಗಳಲ್ಲಿ ಜಯ