ರಾಮನಗರದಲ್ಲಿ ಜೆಡಿಎಸ್‍ಗೆ ಶಾಕ್ – 3 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಗೆಲುವು

Public TV
1 Min Read
RAMANAGARA Karnataka Election Result 2023 Live Updates

ರಾಮನಗರ: ಕುಮಾರಸ್ವಾಮಿ ಅವರಿಗೆ ನೆಲೆ ನೀಡಿದ್ದ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್‍ಗೆ (JDS) ಕಾಂಗ್ರೆಸ್ (Congress) ಶಾಕ್ ನೀಡಿದೆ. ಜಿಲ್ಲೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡು, ಒಂದು ಕ್ಷೇತ್ರವನ್ನು ಜೆಡಿಎಸ್ ಗೆದ್ದುಕೊಂಡಿದೆ.

ರಾಮನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ 87,690 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 76,975 ಸೋಲು ಕಂಡಿದ್ದಾರೆ. ಬಿಜೆಪಿ (BJP) ಅಭ್ಯರ್ಥಿ ಗೌತಮ್ ಗೌಡ 12,912 ಪಡೆದು ಸೋತಿದ್ದಾರೆ. ಕೈ ಅಭ್ಯರ್ಥಿಯ ಗೆಲುವಿನ ಅಂತರ 10,715 ಮತಗಳಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಪ್ರೀತಂ ಗೌಡಗೆ ಸೋಲು – ಜಿಲ್ಲೆಯಲ್ಲಿ 2 ಸ್ಥಾನ ಗೆದ್ದ ಬಿಜೆಪಿ

bjp congress jds 1

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ 96,5922 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ್ 15,374 ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 80,677 ಮತ ಪಡೆದಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಗೆಲುವಿನ ಅಂತರ 15,915 ಮತಗಳಾಗಿದೆ.

ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್ 1,43,023 ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಗರಾಜು 20,631 ಸೋಲು ಕಂಡಿದ್ದಾರೆ. ಬಿಜೆಪಿ ಆರ್.ಅಶೋಕ್ 19,753 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಡಿಕೆಶಿ 1,22,392 ಮತಗಳಿಂದ ಭರ್ಜರಿ ಜಯಗಳಿಸಿದ್ದಾರೆ.

ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಬಾಲಕೃಷ್ಣ 94,650 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ 82,811 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಸಾದ್ ಗೌಡ ಅವರು 20,197 ಮತಗಳನ್ನು ಪಡೆದು ಸೋತಿದ್ದಾರೆ. ಹೆಚ್.ಸಿ.ಬಾಲಕೃಷ್ಣ ಅವರು 11,839 ಮತಗಳನ್ನು ಪಡೆದು ಗೆದ್ದಿದ್ದಾರೆ. ಇದನ್ನೂ ಓದಿ: ಮೈಸೂರು ಜಿಲ್ಲೆಯ ಕ್ಷೇತ್ರಗಳ ಚುನಾವಣಾ ಫಲಿತಾಂಶ

Share This Article