ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ 6 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ 6 ಕ್ಷೇತ್ರಗಳಲ್ಲಿ 4 ಕಾಂಗ್ರೆಸ್, 2 ಕಡೆ ಬಿಜೆಪಿ ಗೆಲುವು ಸಾಧಿಸಿದೆ.
ಶಿರಸಿ: ಬಿಜೆಪಿ (BJP) ಅಭ್ಯರ್ಥಿಯಾಗಿ ಸತತ 6 ಬಾರಿ ಗೆಲುವು ಸಾಧಿಸಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿಗೆ (Vishweshwar Hegde Kageri) ಈ ಬಾರಿ ಹೀನಾಯ ಸೋಲಾಗಿದೆ. ಸ್ಪೀಕರ್ ಕಾಗೇರಿ ವಿರುದ್ಧ ಕಾಂಗ್ರೆಸ್ (Congress) ಅಭ್ಯರ್ಥಿ ಭೀಮಣ್ಣ ನಾಯ್ಕ್ (Bimanna Naik) ಗೆಲುವು ಭರ್ಜರಿ ಗೆಲುವು ಸಾಧಿಸಿದ್ದಾರೆ.
Advertisement
ಶಿರಸಿ (Sirsi) ಕ್ಷೇತ್ರದಲ್ಲಿ ಕಾಂಗ್ರೆಸ್‍ಯಾಗಿ ಅಭ್ಯರ್ಥಿ ಭೀಮಣ್ಣ ನಾಯ್ಕ್, ಬಿಜೆಪಿಯ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್ (JDS) ಅಭ್ಯರ್ಥಿ ಉಪೇಂದ್ರ ಪೈ ಸ್ಪರ್ಧಿಸಿದ್ದರು.
Advertisement
Advertisement
ಕಾರವಾರ: ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ್ ಅವರು ಕಾರವಾರ (Karwar) ಕ್ಷೇತ್ರದಲ್ಲಿ ಹೀನಾಯ ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
Advertisement
ಕಾರವಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಸಾಯಿಲ್, ಬಿಜೆಪಿ ಅಭ್ಯರ್ಥಿಯಾಗಿ ರೂಪಾಲಿ ನಾಯ್ಕ್, ಜೆಡಿಎಸ್ ಅಭ್ಯರ್ಥಿಯಾಗಿ ಚೈತ್ರಾ ಕೊಟಾರ್ಕರ್ ಸ್ಪರ್ಧಿಸಿದ್ದರು.
ಯಲ್ಲಾಪುರ: ಬಿಜೆಪಿ ಅಭ್ಯರ್ಥಿಯಾದ ಸಚಿವ ಶಿವರಾಮ ಹೆಬ್ಬಾರ್ (Shivaram Hebbar) ಗೆಲುವು ಸಾಧಿಸಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಿವರಾಮ ಹೆಬ್ಬಾರ್, ಕಾಂಗ್ರೆಸ್ ಅಭ್ಯರ್ಥಿಯಾಗಿ ವಿ.ಎಸ್ ಪಾಟೀಲ್, ಜೆಡಿಎಸ್ ಅಭ್ಯರ್ಥಿಯಾಗಿ ನಾಗೇಶ್ ನಾಯ್ಕ್ ಸ್ಪರ್ಧಿಸಿದ್ದರು.
ಕುಮಟಾ: ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕರಾದ ದಿನಕರ್ ಶೆಟ್ಟಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ದಿನಕರ್ ಶೆಟ್ಟಿ ಹಾಗೂ ಜೆಡಿಎಸ್ ಅಭ್ಯರ್ಥಿ ಸೂರಜ್ ನಾಯ್ಕ್‍ಗೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆದರೆ ಕೊನೆ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ದಿನಕರ್ ಶೆಟ್ಟಿ ಗೆಲುವು ಸಾಧಿಸಿದ್ದಾರೆ.
ಕುಮಟಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್ ನಾಯ್ಕ್, ಬಿಜೆಪಿ ಅಭ್ಯರ್ಥಿಯಾಗಿ ದಿನಕರ್ ಶೆಟ್ಟಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ನಿವೇದಿತ್ ಆಳ್ವ ಸ್ಪರ್ಧಿಸಿದ್ದರು.
ಹಳಿಯಾಳ: ಹಾಲಿ ಶಾಸಕರಾದ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ ದೇಶಪಾಂಡೆ ಗೆಲುವು ಸಾಧಿಸಿದ್ದಾರೆ. ಹಳಿಯಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ವಿ ದೇಶಪಾಂಡೆ ವಿರುದ್ಧ ಬಿಜೆಪಿಯ ಅಭ್ಯರ್ಥಿಯಾಗಿ ಸುನೀಲ್ ಹೆಗಡೆ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಎಸ್.ಎಲ್.ಘೋಟ್ನೇಕರ್ ಸ್ಪರ್ಧಿಸಿದ್ದರು. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್ 135, ಬಿಜೆಪಿ 65, ಜೆಡಿಎಸ್ 20 ಮುನ್ನಡೆ LIVE Updates
ಭಟ್ಕಳ: ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿಯಾದ ಸುನೀಲ್ ನಾಯ್ಕ್ ಈ ಬಾರಿ ಸೋಲನುಭವಿಸಿದ್ದಾರೆ. ಸುನೀಲ್ ನಾಯ್ಕ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಂಕಾಳ್ ವೈದ್ಯ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಭಟ್ಕಳದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸುನೀಲ್ ನಾಯ್ಕ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಂಕಾಳ್ ವೈದ್ಯ, ಜೆಡಿಎಸ್ ಅಭ್ಯರ್ಥಿಯಾಗಿ ನಾಗೇಂದ್ರ ನಾಯ್ಕ್ ಸ್ಪರ್ಧಿಸಿದ್ದರು. ಇದನ್ನೂ ಓದಿ: ರಾಜ್ಯದ ಚುನಾವಣಾ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ: ಬಿಎಸ್‍ವೈ