ಉಡುಪಿ: ನನ್ನ ಮನಸ್ಸಿಗೆ ಆಗಿರುವ ನೋವು, ಆಘಾತ ಇನ್ನೂ ಕಡಿಮೆಯಾಗಿಲ್ಲ. ನಾನು ಈ ಕ್ಷಣದವರೆಗೆ ತಟಸ್ಥವಾಗಿದ್ದೇನೆ. ನಾಡಿದ್ದು ಹೋಗಿ ಬಿಜೆಪಿಗೆ (BJP) ಮತ ಹಾಕುತ್ತೇನೆ ಎಂದು ಉಡುಪಿ ಜಿಲ್ಲೆಯ ಬೈಂದೂರು (Baindur) ಶಾಸಕ ಸುಕುಮಾರ ಶೆಟ್ಟಿ (Sukumar Shetty) ತಿಳಿಸಿದರು.
ಟಿಕೆಟ್ ತಪ್ಪಿದ ಶಾಸಕರು ಒಂದೋ ಪಕ್ಷಾಂತರ ಮಾಡಿದ್ದಾರೆ. ಇಲ್ಲ ಪಕ್ಷದ ನಿಯಮವನ್ನು ಒಪ್ಪಿ ಅಭ್ಯರ್ಥಿಗಳ ಜೊತೆ ಗೆಲುವಿಗಾಗಿ ಹೋರಾಟವನ್ನು ನಡೆಸುತ್ತಿದ್ದಾರೆ. ಕರಾವಳಿ ಜಿಲ್ಲೆಯ ಪೈಕಿ ಸುಕುಮಾರ ಶೆಟ್ಟಿ ಮಾತ್ರ ವಿಭಿನ್ನ ನಿಲುವನ್ನ ತಳೆದಿದ್ದಾರೆ. ಬೇಸರವನ್ನು ಇನ್ನು ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಸುಕುಮಾರಶೆಟ್ಟಿ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಮಾಡುವ ಸಣ್ಣ ಮನುಷ್ಯ ನಾನಲ್ಲ. ಎದುರಾಳಿ ಪಕ್ಷದ ಜೊತೆ ಕೈಜೋಡಿಸಿದ್ದೇನೆ ಎಂದು ಆರೋಪಿಸುವವರು ಕೀಳು ಮನಸ್ಸಿನವರು. ಪಕ್ಷಾಂತರ ಪಕ್ಷವಿರೋಧಿ ಚಟುವಟಿಕೆ ಮಾಡಿಲ್ಲ ಎಂದು ಹೇಳಿದರು.
ಹಿರಿಯ ನಾಯಕರ ಮೇಲೆ ಗೌರವ ಇದೆ. ಆದರೆ ಪಕ್ಷಕ್ಕೆ ನನ್ನ ಅಭ್ಯರ್ಥಿತನ ಬೇಡವಾಗಿದೆ. ಹಾಗಾಗಿ ನಾನು ಯಾವುದೇ ಪ್ರಚಾರ ಸಭೆ, ರಾಲಿಗಳಲ್ಲಿ ಭಾಗಿ ಆಗಿಲ್ಲ ಯಾವ ಕಾರಣಕ್ಕೆ ನನಗೆ ಟಿಕೆಟ್ ಕೊಡಲಿಲ್ಲ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಮೋದಿ, ಶಾ, ನಡ್ಡಾ, ಸಿಎಂ ಬಂದ್ರು ಸುಕುಮಾರ್ ಶೆಟ್ಟಿ ಬಂದಿಲ್ಲ: ಕರಾವಳಿ ಜಿಲ್ಲೆ ಉಡುಪಿಯ (Udupi) ಚುನಾವಣಾ (Election) ಕದನ ಕುತೂಹಲ ಕೆರಳಿಸಿದೆ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಪೈಕಿ 4 ಕಡೆ ಈ ಬಾರಿ ಹೊಸ ಅಭ್ಯರ್ಥಿಗಳು ನಾಲ್ವರು ಹಾಲಿ ಶಾಸಕರ ಪೈಕಿ ಬೈಂದೂರು ಶಾಸಕರು ತಟಸ್ಥವಾಗಿದ್ದಾರೆ. ಟಿಕೆಟ್ ತಪ್ಪಿದ ಬೇಸರದಿಂದ ಸುಕುಮಾರಶೆಟ್ಟಿ ಇನ್ನೂ ಹೊರ ಬಂದಿಲ್ಲ. ಚುನಾವಣಾ ಪ್ರಚಾರ ನಡೆಸುತ್ತಿಲ್ಲ ಯಾವುದೇ ಸಭೆಗೂ ಶಾಸಕ ಸುಕುಮಾರ ಶೆಟ್ಟಿ ಬರುತ್ತಿಲ್ಲ.
ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ ಜಿಲ್ಲೆಯ 13 ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು. ಎಲ್ಲಾ ಶಾಸಕರು, ಅಭ್ಯರ್ಥಿಗಳು ಭಾಗವಹಿಸಬೇಕಿತ್ತು. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಸುಕುಮಾರಶೆಟ್ಟಿ ಗೈರಾಗಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರಕ್ಕೆ ಬಂದು ಅಭ್ಯರ್ಥಿ ಗುರುರಾಜ್ ಗಂಟೆ ಹೊಳೆ ಪರ ಮತಯಾಚನೆ ಮಾಡಿದ್ದಾರೆ. ಈ ರೋಡ್ ಶೋದಲ್ಲೂ ಶಾಸಕ ಸುಕುಮಾರ ಶೆಟ್ಟಿ ಭಾಗಿಯಾಗಿಲ್ಲ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋದಿ ಮೆಗಾ ರೋಡ್ ಶೋ – ಯಾವ ಸಮಯದಲ್ಲಿ ಎಲ್ಲಿ? ಯಾವ ರಸ್ತೆಯಲ್ಲಿ ಸಂಚಾರ?
ಸುಮಾರು 20,000 ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಜಮಾಯಿಸಿದ್ದರು. ಈ ಕಾರ್ಯಕ್ರಮದಿಂದಲೂ ಶಾಸಕ ಶೆಟ್ಟಿ ದೂರ ಉಳಿದಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಬಂದಾಗಲೂ ಕರೆ ಮಾಡಿದ್ದರು. ಅದಕ್ಕೂ ಸುಕುಮಾರ್ ಶೆಟ್ಟಿ ಪೂರಕವಾಗಿ ಸ್ಪಂದನೆ ಮಾಡಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಡುವ ಸಂದರ್ಭವು ಸುಕುಮಾರಶೆಟ್ಟಿ ಭೇಟಿಯಾಗದೆ ಸಬೂಬು ಹೇಳಿದ್ದರು.
ರಾಜ್ಯದ ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ 4 ಬಾರಿ ಫೋನ್ ಕರೆ ಮಾಡಿ ಚುನಾವಣಾ ಓಡಾಟದಲ್ಲಿ ಭಾಗಿ ಆಗುವಂತೆ ಅಭ್ಯರ್ಥಿ ಪರ ಪ್ರಚಾರ ಮಾಡುವಂತೆ ಕೇಳಿಕೊಂಡಿದ್ದರು. ಇದಕ್ಕೂ ಸುಕುಮಾರ ಶೆಟ್ಟಿ ಒಪ್ಪಿಲ್ಲ. ಬಿ.ವೈ ರಾಘವೇಂದ್ರ ರಾಜ್ಯದ ಸಚಿವರು ಆರ್ ಎಸ್ ಎಸ್, ಸಂಘ ಪರಿವಾರದ ಮುಖಂಡರು ಮನವೊಲಿಸಿದರು ಸುಕುಮಾರಶೆಟ್ಟಿ ಕರಗಿಲ್ಲ. ಇದನ್ನೂ ಓದಿ: ರೋಡ್ ಶೋನಲ್ಲಿ ಸರ್ಕಾರದ ಸಾಧನೆ, ಬೆಂಗಳೂರು ಕೊಡುಗೆಗಳ ಉಲ್ಲೇಖದ ಫ್ಲೆಕ್ಸ್ ಅಳವಡಿಕೆ