ಬೆಂಗಳೂರು: ಕರ್ನಾಟಕ ಚುನಾವಣೆಗೆ (Karnataka Election) ನಾಮಪತ್ರ ಸಲ್ಲಿಕೆಯಾಗುತ್ತಿದ್ದಂತೆ ಬಿಜೆಪಿ ತಾರಾ ಪ್ರಚಾರಕರ (BJP Star Campaigners) ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್ (Yogi Adityanath), ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಕೇಂದ್ರ ಬಿಜೆಪಿ ನಾಯಕರು, ಕೇಂದ್ರ ಸಚಿವರು, ಸಂಸದರು, ಶಾಸಕರನ್ನು ಒಳಗೊಂಡ 40 ಮಂದಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ.
Advertisement
Advertisement
ಪಟ್ಟಿಯಲ್ಲಿ ಯಾರಿದ್ದಾರೆ?
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹಸಚಿವ ಅಮಿತ್ ಶಾ, ಕೇಂದ್ರದ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿ ಅಣ್ಣಾಮಲೈ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವೆ ಸ್ಮೃತಿ ಇರಾನಿ. ಇದನ್ನೂ ಓದಿ: ಶೆಟ್ಟರ್ ನಿರ್ಧಾರದಿಂದ ಉಂಟಾದ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾದ ಜೆ.ಪಿ ನಡ್ಡಾ
Advertisement
Advertisement
ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಸಹ ಉಸ್ತುವಾರಿ ಡಿ.ಕೆ ಅರುಣ, ಯುಪಿ ಸಿಎಂ ಯೋಗಿ ಆದಿತ್ಯನಾಥ್, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ, ಕೇಂದ್ರ ಸಂಸದೀಯ ಇಲಾಖೆ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ರಾಜ್ಯ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ, ಎ ನಾರಾಯಣಸ್ವಾಮಿ, ಭಗವಂತ ಖೂಬಾ.
ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಸದಾನಂದಗೌಡ, ಮಾಜಿ ಡಿಸಿಎಂ ಈಶ್ವರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆರ್ ಅಶೋಕ್, ಶ್ರೀರಾಮುಲು, ಕೋಟಾ ಶ್ರೀನಿವಾಸ್ ಪೂಜಾರಿ.
ಮಾಜಿ ಸಚಿವ ಅರವಿಂದ ಲಿಂಬಾವಳಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಸದ ಉಮೇಶ್ ಜಾಧವ್, ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ ರಾಜೇಶ್, ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್, ನಟಿಯರಾದ ನಟಿಯರಾದ ಶೃತಿ, ತಾರಾ ಅನುರಾಧ, ಮಾಜಿ ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ.