ಉಡುಪಿ: ರಾಜಕೀಯ ಕಾರ್ಯಕ್ರಮಗಳಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಸೋಮವಾರ ಕರಾವಳಿಯ ಸನ್ಯಾಸಿಗಳ ಜೊತೆ ಸಭೆ ಮಾಡಿ ಚರ್ಚೆ ಮಾಡಿದ್ದಾರೆ. ಮುಂಬರುವ ಚುನಾವಣಾ (Election) ಹೊಸ್ತಿಲಲ್ಲಿ ಈ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಬೇಡಿಕೆಗಳ ಜೊತೆ ಕೆಲ ಸೂಚನೆಗಳನ್ನು ಸ್ವಾಮೀಜಿಗಳು ಜೆ.ಪಿ ನಡ್ಡಾಗೆ ನೀಡಿದ್ದಾರೆ.
ಜೆಪಿ ನಡ್ಡಾ ಕೃಷ್ಣ ಮಠಕ್ಕೆ (Udupi Krishna Mutt) ಭೇಟಿ ನೀಡಿ, ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥರಿಂದ ಮಂತ್ರಾಕ್ಷತೆ ಸ್ವೀಕರಿಸಿದರು. ಪೇಜಾವರ ಮಠದ ಶ್ರೀ ರಾಮವಿಠಲ ಸಭಾಭವನದಲ್ಲಿ ಜೆ.ಪಿ. ನಡ್ಡಾ ಅವರೊಂದಿಗೆ ಕರಾವಳಿಯ 15 ಸ್ವಾಮೀಜಿಗಳ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯದ ಆಡಳಿತ ನಡೆಸುವ ಸರ್ಕಾರಗಳಿಂದ ಕರಾವಳಿಯ ಸಾಧು ಸಂತರಿಗೆ ಇರುವ ಅಪೇಕ್ಷೆಗಳನ್ನು ನಡ್ಡಾ ಅವರ ಮುಂದಿಟ್ಟರು. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಸಚಿವ ಅಂಗಾರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ ರವಿ, ಇಂಧನ ಸಚಿವ ಸುನೀಲ್ ಕುಮಾರ್ ಸೇರಿದಂತೆ ಪ್ರಮುಖ ಮುಖಂಡರು ನಡ್ಡಾ ಅವರೊಂದಿಗೆ ಸಭೆಯಲ್ಲಿ ಹಾಜರಿದ್ದರು.
Advertisement
Advertisement
ಸಭೆಯ ಮುಂದಾಳತ್ವ ವಹಿಸಿದ್ದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರು ಮಾತನಾಡಿ, ಸನಾತನ ಧರ್ಮ ಸಂಸ್ಕೃತಿ ಸದ್ವಿಚಾರಗಳಿಗೆ ಸದಾ ಮನ್ನಣೆ ನೀಡುವುದರ ಜೊತೆಗೆ ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಚರ್ಚಿಸಲಾಯಿತು. ಇದನ್ನೂ ಓದಿ: ಬೂತ್ ಮಟ್ಟದ ಕಾರ್ಯಕರ್ತರಿಗೆ ಜೆ.ಪಿ ನಡ್ಡಾ ಬೂಸ್ಟ್; ಬಿಜೆಪಿ ಗೆಲುವಿಗೆ ಪಣ ತೊಡುವಂತೆ ಕರೆ
Advertisement
ಕರಾವಳಿಯ ಸಮೃದ್ಧ ಪ್ರಾಕೃತಿಕ ಮತ್ತು ಸಾಂಸ್ಕೃತಿಕ, ಧಾರ್ಮಿಕ ಸಂಪನ್ಮೂಲಗಳಿಗೆ ಹಾನಿಯಾಗಬಾರದು. ಕರಾವಳಿಯ ಯುವಕರ ವಲಸೆಯನ್ನು ತಪ್ಪಿಸಲು ಉದ್ಯಮವನ್ನು ಸೃಷ್ಟಿಸುವ ಮತ್ತು ಕರಾವಳಿ ಪ್ರಗತಿಗೆ ಸಹಕಾರಿಯಾಗುವ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಕರಾವಳಿಯಲ್ಲಿ ಅತೀ ಹೆಚ್ಚು ಪ್ರಚಲಿತದಲ್ಲಿರುವ ತುಳು ಭಾಷೆಗೆ ಸರ್ಕಾರ ಸೂಕ್ತ ಮಾನ್ಯತೆ ನೀಡಬೇಕು ಎಂದು ಕೇಳಿದ್ದೇವೆ.
Advertisement
ಉಡುಪಿ ಶ್ರೀಕೃಷ್ಣ ಮಠಕ್ಕೆ ಇಂದು ಭೇಟಿ ನೀಡಿ ನಾಡಿನ ಶ್ರೇಯೋಭಿವೃದ್ಧಿಗಾಗಿ ಶ್ರೀಕೃಷ್ಣನಲ್ಲಿ ಪ್ರಾರ್ಥಿಸಿದೆ. ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದ ಪಡೆದು ಕೃತಾರ್ಥನಾದೆ. pic.twitter.com/Or2HQLzTky
— Jagat Prakash Nadda (@JPNadda) February 20, 2023
ದೇಶ ದ್ರೋಹಿ ಮತ್ತು ಉಗ್ರವಾದಿ ಚಟುವಟಿಕೆಗಳನ್ನು ಮಟ್ಟಹಾಕಬೇಕು, ಕರಾವಳಿ ಮಲೆನಾಡು ಜಿಲ್ಲೆಗಳನ್ನು ಕೇಂದ್ರವಾಗಿಟ್ಟುಕೊಂಡು ರಾಷ್ಟ್ರೀಯ ತನಿಖಾ ದಳದ ವಿಭಾಗವನ್ನು ಶೀಘ್ರ ಆರಂಭಿಸಬೇಕು, ಗೋ ಹತ್ಯಾ ನಿಷೇಧ ಕಾನೂನು ಸಮರ್ಪಕ ಜಾರಿಗೆ ತರುವುದರ ಜೊತೆಗೆ, ಗೋ ಸಂರಕ್ಷಣೆಗೆ ಪೂರಕ ಯೋಜನೆಗಳ ಮೂಲಕ ನೆರವು ನೀಡಬೇಕೆಂದು ಆಗ್ರಹಿಸಿದ್ದೇವೆ. ಭ್ರಷ್ಟಾಚಾರ ಮುಕ್ತ, ಸ್ವಚ್ಛ , ಪಾರದರ್ಶಕ ಆಡಳಿತ ನೀಡಬೇಕು, ದೇವಸ್ಥಾನಗಳ ಭೂಮಿ ಅತಿಕ್ರಮಣ ತಡೆಗಟ್ಟಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದೇವೆ ಎಂದು ತಿಳಿಸಿದರು.
ಸಭೆಯಲ್ಲಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ, ಕುಕ್ಕೆ ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ, ಉಡುಪಿ ಬೈಲೂರಿನ ರಾಮಕೃಷ್ಣ ಆಶ್ರಮದ ಶ್ರೀ ವಿನಾಯಕಾನಂದ, ಚಿತ್ರಾಪುರ ಮಠದ ಶ್ರೀ ವಿದ್ಯಾಯೇಂದ್ರ, ಮೂಡಬಿದ್ರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ, ಮಾಣಿಲ ಶ್ರೀ ಮೋಹನದಾಸ, ಆನೆಗುಂದಿ ಸ್ವರಸ್ವತಿ ಪೀಠಂ ನ ಶ್ರೀ ಕಾಳ ಹಸ್ತೇಂದ್ರ ಸರಸ್ವತಿ, ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಉಪಸ್ಥಿತರಿದ್ದರು.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k