Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುತೂಹಲಕ್ಕೆ ಕಾರಣವಾಯ್ತು ಕರಾವಳಿ ಸ್ವಾಮೀಜಿಗಳ ಜೊತೆಗಿನ ನಡ್ಡಾ ಸಭೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕುತೂಹಲಕ್ಕೆ ಕಾರಣವಾಯ್ತು ಕರಾವಳಿ ಸ್ವಾಮೀಜಿಗಳ ಜೊತೆಗಿನ ನಡ್ಡಾ ಸಭೆ

Districts

ಕುತೂಹಲಕ್ಕೆ ಕಾರಣವಾಯ್ತು ಕರಾವಳಿ ಸ್ವಾಮೀಜಿಗಳ ಜೊತೆಗಿನ ನಡ್ಡಾ ಸಭೆ

Public TV
Last updated: February 21, 2023 8:17 am
Public TV
Share
2 Min Read
Karnataka elections 2023 BJP president J.P. Nadda coastal visit meets swamijis in Udupi
SHARE

ಉಡುಪಿ: ರಾಜಕೀಯ ಕಾರ್ಯಕ್ರಮಗಳಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಸೋಮವಾರ ಕರಾವಳಿಯ ಸನ್ಯಾಸಿಗಳ ಜೊತೆ ಸಭೆ ಮಾಡಿ ಚರ್ಚೆ ಮಾಡಿದ್ದಾರೆ. ಮುಂಬರುವ ಚುನಾವಣಾ (Election) ಹೊಸ್ತಿಲಲ್ಲಿ ಈ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಬೇಡಿಕೆಗಳ ಜೊತೆ ಕೆಲ ಸೂಚನೆಗಳನ್ನು ಸ್ವಾಮೀಜಿಗಳು ಜೆ.ಪಿ ನಡ್ಡಾಗೆ ನೀಡಿದ್ದಾರೆ.

ಜೆಪಿ ನಡ್ಡಾ ಕೃಷ್ಣ ಮಠಕ್ಕೆ (Udupi Krishna Mutt) ಭೇಟಿ ನೀಡಿ, ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥರಿಂದ ಮಂತ್ರಾಕ್ಷತೆ ಸ್ವೀಕರಿಸಿದರು. ಪೇಜಾವರ ಮಠದ ಶ್ರೀ ರಾಮವಿಠಲ ಸಭಾಭವನದಲ್ಲಿ ಜೆ.ಪಿ. ನಡ್ಡಾ ಅವರೊಂದಿಗೆ ಕರಾವಳಿಯ 15 ಸ್ವಾಮೀಜಿಗಳ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯದ ಆಡಳಿತ ನಡೆಸುವ ಸರ್ಕಾರಗಳಿಂದ ಕರಾವಳಿಯ ಸಾಧು ಸಂತರಿಗೆ ಇರುವ ಅಪೇಕ್ಷೆಗಳನ್ನು ನಡ್ಡಾ ಅವರ ಮುಂದಿಟ್ಟರು. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಸಚಿವ ಅಂಗಾರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ ರವಿ, ಇಂಧನ ಸಚಿವ ಸುನೀಲ್ ಕುಮಾರ್ ಸೇರಿದಂತೆ ಪ್ರಮುಖ ಮುಖಂಡರು ನಡ್ಡಾ ಅವರೊಂದಿಗೆ ಸಭೆಯಲ್ಲಿ ಹಾಜರಿದ್ದರು.

JP Nadda

ಸಭೆಯ ಮುಂದಾಳತ್ವ ವಹಿಸಿದ್ದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರು ಮಾತನಾಡಿ, ಸನಾತನ ಧರ್ಮ‌ ಸಂಸ್ಕೃತಿ ಸದ್ವಿಚಾರಗಳಿಗೆ ಸದಾ ಮನ್ನಣೆ ನೀಡುವುದರ ಜೊತೆಗೆ ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಚರ್ಚಿಸಲಾಯಿತು. ಇದನ್ನೂ ಓದಿ: ಬೂತ್ ಮಟ್ಟದ ಕಾರ್ಯಕರ್ತರಿಗೆ ಜೆ.ಪಿ ನಡ್ಡಾ ಬೂಸ್ಟ್; ಬಿಜೆಪಿ ಗೆಲುವಿಗೆ ಪಣ ತೊಡುವಂತೆ ಕರೆ

ಕರಾವಳಿಯ ಸಮೃದ್ಧ ಪ್ರಾಕೃತಿಕ ಮತ್ತು ಸಾಂಸ್ಕೃತಿಕ, ಧಾರ್ಮಿಕ ಸಂಪನ್ಮೂಲಗಳಿಗೆ ಹಾನಿಯಾಗಬಾರದು. ಕರಾವಳಿಯ ಯುವಕರ ವಲಸೆಯನ್ನು ತಪ್ಪಿಸಲು ಉದ್ಯಮವನ್ನು ಸೃಷ್ಟಿಸುವ ಮತ್ತು ಕರಾವಳಿ ಪ್ರಗತಿಗೆ ಸಹಕಾರಿಯಾಗುವ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಕರಾವಳಿಯಲ್ಲಿ ಅತೀ ಹೆಚ್ಚು ಪ್ರಚಲಿತದಲ್ಲಿರುವ ತುಳು ಭಾಷೆಗೆ ಸರ್ಕಾರ ಸೂಕ್ತ ಮಾನ್ಯತೆ ನೀಡಬೇಕು ಎಂದು ಕೇಳಿದ್ದೇವೆ.

ಉಡುಪಿ ಶ್ರೀಕೃಷ್ಣ ಮಠಕ್ಕೆ ಇಂದು ಭೇಟಿ ನೀಡಿ ನಾಡಿನ ಶ್ರೇಯೋಭಿವೃದ್ಧಿಗಾಗಿ ಶ್ರೀಕೃಷ್ಣನಲ್ಲಿ ಪ್ರಾರ್ಥಿಸಿದೆ. ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದ ಪಡೆದು ಕೃತಾರ್ಥನಾದೆ. pic.twitter.com/Or2HQLzTky

— Jagat Prakash Nadda (@JPNadda) February 20, 2023

ದೇಶ ದ್ರೋಹಿ ಮತ್ತು ಉಗ್ರವಾದಿ ಚಟುವಟಿಕೆಗಳನ್ನು ಮಟ್ಟಹಾಕಬೇಕು, ಕರಾವಳಿ ಮಲೆನಾಡು ಜಿಲ್ಲೆಗಳನ್ನು ಕೇಂದ್ರವಾಗಿಟ್ಟುಕೊಂಡು ರಾಷ್ಟ್ರೀಯ ತನಿಖಾ ದಳದ ವಿಭಾಗವನ್ನು ಶೀಘ್ರ ಆರಂಭಿಸಬೇಕು, ಗೋ ಹತ್ಯಾ ನಿಷೇಧ ಕಾನೂನು ಸಮರ್ಪಕ ಜಾರಿಗೆ ತರುವುದರ ಜೊತೆಗೆ, ಗೋ ಸಂರಕ್ಷಣೆಗೆ ಪೂರಕ ಯೋಜನೆಗಳ ಮೂಲಕ ನೆರವು ನೀಡಬೇಕೆಂದು ಆಗ್ರಹಿಸಿದ್ದೇವೆ. ಭ್ರಷ್ಟಾಚಾರ ಮುಕ್ತ, ಸ್ವಚ್ಛ , ಪಾರದರ್ಶಕ ಆಡಳಿತ ನೀಡಬೇಕು, ದೇವಸ್ಥಾನಗಳ ಭೂಮಿ ಅತಿಕ್ರಮಣ ತಡೆಗಟ್ಟಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದೇವೆ ಎಂದು ತಿಳಿಸಿದರು.

ಸಭೆಯಲ್ಲಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ, ಕುಕ್ಕೆ ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ, ಉಡುಪಿ ಬೈಲೂರಿನ ರಾಮಕೃಷ್ಣ ಆಶ್ರಮದ ಶ್ರೀ ವಿನಾಯಕಾನಂದ, ಚಿತ್ರಾಪುರ ಮಠದ ಶ್ರೀ ವಿದ್ಯಾಯೇಂದ್ರ, ಮೂಡಬಿದ್ರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ, ಮಾಣಿಲ ಶ್ರೀ ಮೋಹನದಾಸ, ಆನೆಗುಂದಿ ಸ್ವರಸ್ವತಿ ಪೀಠಂ ನ ಶ್ರೀ ಕಾಳ ಹಸ್ತೇಂದ್ರ ಸರಸ್ವತಿ, ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಉಪಸ್ಥಿತರಿದ್ದರು.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpJP Naddakarnatakakrishna muttpoliticsudupiಉಡುಪಿಕರಾವಳಿಚುನಾವಣೆಜೆಪಿ ನಡ್ಡಾಬಿಜೆಪಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Modi Trump White House
Latest

ಪಾಕ್‌ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಮೋದಿಗೆ ಟ್ರಂಪ್‌ ಕರೆ – 40 ನಿಮಿಷ ಮಾತುಕತೆ

Public TV
By Public TV
2 minutes ago
Tyavarekoppa Hippopotamus Shivamogga
Latest

ಪಶುವೈದ್ಯೆ ಕೊಂದಿದ್ದ ನೀರಾನೆ ಬಹು ಅಂಗಾಂಗ ಸೋಂಕಿನಿಂದ ಸಾವು

Public TV
By Public TV
13 minutes ago
Rajanna Naseer next Zameer Ahmed CM Siddaramaiahs close circle friends is the big target Karnataka Politics
Bengaluru City

ರಾಜಣ್ಣ, ನಸೀರ್‌ ಆಯ್ತು ಮುಂದೆ ಜಮೀರ್‌? – ಸಿಎಂ ಆಪ್ತರೇ ಬಿಗ್‌ ಟಾರ್ಗೆಟ್‌

Public TV
By Public TV
26 minutes ago
leopard rescue udupi
Latest

ಉಡುಪಿ| ಬಾವಿಗೆ ಬಿದ್ದಿದ್ದ ಚಿರತೆ ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

Public TV
By Public TV
52 minutes ago
Strait of Hormuz 1
Latest

ಅಮೆರಿಕ ದಿಗ್ಭಂಧನಕ್ಕೆ ಸೆಡ್ಡು – ಹಾರ್ಮುಜ್‌ ದಾಟಿದ ಇರಾನ್‌ ಬಂದರಿನಿಂದ ಬಂದ 2 ಹಡಗು

Public TV
By Public TV
1 hour ago
Marathi mandatory for rickshaw and taxi drivers in Maharashtra from May 1 Pratap Sarnaik RTO
Latest

ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ – ಇಲ್ಲದಿದ್ದರೆ ಲೈಸೆನ್ಸ್‌ ರದ್ದು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?