ಬಸ್‍ಗಳಿಲ್ಲದೆ ಟಾಪ್ ನಲ್ಲೇ ಕುಳಿತು ಪ್ರಯಾಣಿಸ್ತಿರೋ ಮತದಾರರು!

Public TV
1 Min Read
NML TRAFFIC

ಬೆಂಗಳೂರು: ಇಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ನಗರದಲ್ಲಿ ನೆಲೆಸಿರುವ ಮತದಾರರು, ಮತದಾನ ಮಾಡುವುದಕ್ಕೆ ಊರಿಗೆ ತೆರಳಲು ಬಸ್ ಇಲ್ಲದೆ ಪರದಾಡುತ್ತಿದ್ದಾರೆ.

ಸಾರಿಗೆ ಬಸ್‍ಗಳನ್ನು ಚುನಾವಣೆ ಕೆಲಸಕ್ಕಾಗಿ ಬಳಸಿಕೊಳ್ಳಲಾಗಿದೆ. ಹೀಗಾಗಿ ಸಾರಿಗೆ ಬಸ್‍ಗಳಿಲ್ಲದ ಮತದಾರರು ಖಾಸಗಿ ವಾಹನಗಳ ಮೊರೆ ಹೋಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆಯಿಂದಲೇ ನೆಲಮಂಗಲದ ಟೋಲ್ ಗೇಟ್ ಬಳಿ ಸಖತ್ ಟ್ರಾಫಿಕ್ ಜಾಮ್ ಉಂಟಾಗಿದೆ. ಕ್ಕಿಕಿರಿದು ತುಂಬಿರುವ ಬಸ್‍ಗಳಲ್ಲಿ ಪ್ರಯಾಣಿಸಲು ಸಾಧ್ಯವಾಗದೇ ಮಹಿಳೆಯರು, ವೃದ್ಧರು ಪರದಾಡುತ್ತಿದ್ದಾರೆ.

NML Traffic 1

ರಾತ್ರಿಯಿಂದಲೇ ಊರಿಗೆ ತೆರಳಲು ಸಜ್ಜಾಗಿದ್ದ ಪ್ರಯಾಣಿಕರು ಸಂಜೆಯಿಂದ ಕಾದು ಕುಳಿತ್ರೂ, ಬಸ್ ವ್ಯವಸ್ಥೆ ಇಲ್ಲ ಪರಿಣಾಮವಾಗಿ ಪ್ರಯಾಣಿಕರು ಮೆಜೆಸ್ಟಿಕ್‍ನ ಡಿಪೋದ ಮುಂದೆ ಸರ್ಕಾರಕ್ಕೆ ಧಿಕ್ಕಾರ ಕೂಗಿದ್ದಾರೆ.

ಅಷ್ಟೇ ಅಲ್ಲದೇ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಂಚರಿಸುತ್ತಿದ್ದ ಬಸ್‍ಗಳನ್ನ ತಡೆಯಲು ಮುಂದಾಗಿದ್ದಾರೆ. ಒಂದು ತಿಂಗಳು ಮುಂಚಿತವಾಗಿ ಬಸ್‍ಗಾಗಿ ಟಿಕೆಟ್ ಬುಕ್ ಮಾಡಿದರೂ ಬಸ್ ವ್ಯವಸ್ಥೆ ಇರಲಿಲ್ಲ. ಸರ್ಕಾರ ರಚನೆ ಮಾಡುವುದಕ್ಕೆ ನಮ್ಮ ವೋಟ್ ಬೇಕು. ಜನರ ಸಮಸ್ಯೆ ಪರಿಹರಿಸುವುದಕ್ಕೆ ಯಾವ ಅಧಿಕಾರಿಯೂ ಬರಲ್ಲ. ಇಂತಹವರಿಗೆ ನಾವು ಮತದಾನ ಮಾಡಬೇಕು ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

NML Traffic 2

NML Traffic 3

Share This Article
Leave a Comment

Leave a Reply

Your email address will not be published. Required fields are marked *