ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಆರಂಭವಾಗಿದೆ. ಒಟ್ಟು 222 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಮೇ 15ಕ್ಕೆ ಮತ ಎಣಿಕೆ ನಡೆಯಲಿದೆ. ಇಂದು ಮಧ್ಯಾಹ್ನದ ಬಳಿಕ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಬೆಳಗ್ಗಿನ ಅವಧಿಯಲ್ಲೇ ಬಿರುಸಿನ ಮತದಾನ ನಡೆಯುವ ಸಾಧ್ಯತೆಯಿದೆ.
ರಾಜ್ಯ ವಿಧಾನಸಭೆಯ 224 ಕ್ಷೇತ್ರಗಳ ಪೈಕಿ ಜಯನಗರ, ರಾಜರಾಜೇಶ್ವರಿನಗರ ಹೊರತು ಪಡಿಸಿ 222 ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮೂರು ಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಎರಡೂವರೆ ಸಾವಿರ ಅಭ್ಯರ್ಥಿಗಳ ರಾಜಕೀಯ ಹಣೆಬರಹವನ್ನ ಮತದಾರರು ನಿರ್ಧರಿಸಲಿದ್ದಾರೆ.
Advertisement
ಜಯನಗರ ಅಭ್ಯರ್ಥಿ ಬಿ.ಎನ್ ವಿಜಯ್‍ಕುಮಾರ್ ನಿಧನದಿಂದ ಜಯನಗರ ಹಾಗೂ ಮತಚೀಟಿ ಅಕ್ರಮದ ಹಿನ್ನೆಲೆಯಲ್ಲಿ ರಾಜಾರಾಜೇಶ್ವರಿನಗರ ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ. ರಾಜ್ಯದಲ್ಲಿ ಒಟ್ಟಾರೆ 56,696 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಮತದಾನದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಕ್ತ, ನ್ಯಾಯಸಮ್ಮತ, ಶಾಂತಿಯುತವಾಗಿ ನಡೆಸಲು ರಾಜ್ಯ ಪೊಲೀಸ್ ಇಲಾಖೆ ಸಕಲ ರೀತಿಯಲ್ಲೂ ಸಜ್ಜಾಗಿದೆ. ಈಗಾಗಲೇ ಎಲ್ಲಾ ಮತಗಟ್ಟೆಗಳಲ್ಲೂ ಸಿದ್ಧತೆ ಪೂರ್ಣಗೊಂಡಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಮತದಾನ ಶುರವಾಗಲಿದೆ. .