ಬೆಂಗಳೂರು: ಸಂಸತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಚನ್ನಪಟ್ಟಣ (Channapatna) ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ರಾಜೀನಾಮೆ ನೀಡಿದ್ದಾರೆ.
ಇಂದು ಬೆಳಗ್ಗೆ ಸ್ಪೀಕರ್ ಯಟಿ ಖಾದರ್ (UT Khader) ಕೊಠಡಿಗೆ ಆಗಮಿಸಿದ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ಸಲ್ಲಿಸುವ ವೇಳೆ ಜಿಟಿ ದೇವೇಗೌಡ, ಭೋಜೇಗೌಡರು ಉಪಸ್ಥಿತರಿದ್ದರು. ಇದನ್ನೂ ಓದಿ: G7 Group Photo | ಮಧ್ಯದಲ್ಲಿ ನಿಂತ ಭಾರತ: ಮೋದಿ ಹೇಳಿದ್ದೇನು?
Advertisement
Advertisement
ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮಂಡ್ಯದಿಂದ (Mandya) ಗೆದ್ದ ಕುಮಾರಸ್ವಾಮಿ ಮೋದಿ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿ ನೇಮಕವಾಗಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್ ಬಳಸಿಕೊಂಡು ಕೊಲೆ ಮಾಡುವುದು ಎಷ್ಟು ಸರಿ? – ದರ್ಶನ್ ಕೃತ್ಯ ಖಂಡಿಸಿದ ರಮ್ಯಾ
Advertisement
ಇಂದು ರಾಜೀನಾಮೆ ನೀಡುವ ಮೊದಲು ಬೆಳಗ್ಗೆ ಕುಮಾರಸ್ವಾಮಿ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದರು. ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಸಚಿವನಾಗಿ ನನ್ನ ಕೆಲಸ ಯಶಸ್ವಿಯಾಗಲು ವೆಂಕಟೇಶ್ವರನ ಆಶೀರ್ವಾದ ಪಡೆಯಲು ನಾನು ಬಂದಿದ್ದೇನೆ ಎಂದು ಹೇಳಿದ್ದರು.
Advertisement