ಬೆಂಗಳೂರು: 2025ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (CET) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಪಠ್ಯಕ್ರಮವನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.ಇದನ್ನೂ ಓದಿ: ಕೇಂದ್ರದಿಂದ ಬಡವರಿಗೆ ಮನೆ ಕಟ್ಟಿಕೊಡುವ ಟಾರ್ಗೆಟ್ ಡಬಲ್, ಅನುದಾನದ ಸದ್ಬಳಕೆಯಾಗ್ತಿಲ್ಲ – ಚೌಹಾಣ್ ಬೇಸರ
Advertisement
ಈ ಕುರಿತು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ, ಪ್ರಥಮ ಮತ್ತು ದ್ವಿತೀಯ ಪಿಯುಸಿಯ ಭೌತವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವವಿಜ್ಞಾನ ವಿಷಯಗಳ ಪಠ್ಯಕ್ರಮವನ್ನು ವೆಬ್‌ಸೈಟ್‌ನಲ್ಲಿ ಹಾಕಿದ್ದು, ಅದನ್ನು ನೋಡಿಕೊಂಡೇ ಪರೀಕ್ಷೆಗೆ ತಯಾರಿ ನಡೆಸಿಕೊಳ್ಳಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Advertisement
ಎನ್‌ಸಿಆರ್‌ಟಿಸಿ ಪಠ್ಯಕ್ರಮ ಹಾಗೂ ಶಾಲಾ ಶಿಕ್ಷಣ (PUC) ಇಲಾಖೆ ಪ್ರಕಟಿಸಿರುವ ಪಠ್ಯ ಪುಸ್ತಕಗಳನ್ನು ಆಧಾರವಾಗಿ ಇಟ್ಟುಕೊಂಡೇ ಈ ಪಠ್ಯಕ್ರಮ ರಚಿಸಲಾಗಿದೆ. ಇದನ್ನು ಪಿಯು ಕಾಲೇಜುಗಳ ವಿಷಯ ತಜ್ಞರಿಂದಲೂ ಪರಿಶೀಲನೆ ಮಾಡಿಸಲಾಗಿದೆ ಎಂದು ವಿವರಿಸಿದ್ದಾರೆ.ಇದನ್ನೂ ಓದಿ: ಸೈಫ್ ಅಲಿ ಖಾನ್ ಚಾಕು ಇರಿತ ಕೇಸ್ – ಶಂಕಿತ ದಾಳಿಕೋರ ಅರೆಸ್ಟ್