ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (High Security Number Plates) ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ ಸದಸ್ಯ ಮಧು ಜಿ ಮಾದೇಗೌಡ ಪ್ರಶ್ನೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಉತ್ತರ ನೀಡಿದರು. ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17, 2024ಕಕ್ಕೆ ಗಡುವು ಮುಕ್ತಾಯವಾಗಲಿದೆ. ಹೀಗಾಗಿ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ದೇವಾಲಯಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ: ರಾಮಲಿಂಗಾ ರೆಡ್ಡಿ
ರಾಜ್ಯದಲ್ಲಿ ಈಗಾಗಲೇ 18,32,787 ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ರಾಜ್ಯದಲ್ಲಿ 9.16%. ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿದೆ. ಹೀಗಾಗಿ 3 ತಿಂಗಳು ಅವಧಿ ವಿಸ್ತರಣೆ ಮಾಡಿ ಆದಷ್ಟು ಬೇಗ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ವಿವರಿಸಿದರು. ಇದನ್ನೂ ಓದಿ: ಬೆಂಗಳೂರಿಗೆ ಬಂತು ಡ್ರೈವರ್‌ಲೆಸ್ ಮೆಟ್ರೋ