ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ದಿನಗಣನೆ ಶುರುವಾಗಿದೆ. ಮೇ 28ರಂದು ಫಿಲ್ಮ್ ಚೇಂಬರ್ ಎಲೆಕ್ಷನ್ ನಡೆಯಲಿದ್ದು, ಇದೀಗ ಅಧ್ಯಕ್ಷ ಸ್ಥಾನಕ್ಕೆ ಸಾ.ರಾ ಗೋವಿಂದ್ ನಾಮಪತ್ರ ಸಲ್ಲಿಸಿದ್ದಾರೆ.
Advertisement
ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಮೇ 28ಕ್ಕೆ ಫಿಲ್ಮ್ ಚೇಂಬರ್ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ಸದ್ಯ ಅಧ್ಯಕ್ಷ ಸ್ಥಾನಕ್ಕೆ ಸಾ.ರಾ ಗೋವಿಂದ್ ನಾಮಪತ್ರ ಸಲ್ಲಿಸಿದ್ದಾರೆ. ಎರಡು ವರ್ಷಕ್ಕೊಮ್ಮೆ ವಾಣಿಜ್ಯ ಮಂಡಳಿ ಚುನಾವಣೆ ನಡೆಯುತ್ತದೆ. ಆದರೆ ಕೊರೊನಾ ಕಾರಣದಿಂದ ಪದೇ ಪದೇ ಚುನಾವಣೆ ಮುಂದೂಡಿಕೆ ಆಗುತ್ತಿತ್ತು. ಹಾಗಾಗಿ ಅಧ್ಯಕ್ಷ ಸ್ಥಾನದಲ್ಲಿ ಜೈರಾಜ್ ಅವರೇ ಮುಂದುವರಿದಿದ್ದರು. ಇದನ್ನೂ ಓದಿ: ಅಮಿತಾಭ್ ಬಚ್ಚನ್ ಮೊಮ್ಮಗ ಅಗಸ್ತ್ಯ ನಂದಾ ಬಾಲಿವುಡ್‌ಗೆ ಎಂಟ್ರಿ: ಶುಭ ಹಾರೈಸಿದ ಬಿಗ್ ಬಿ
Advertisement
Advertisement
ಮೊನ್ನೆಯಷ್ಟೇ ಫಿಲ್ಮಂ ಚೇಂಬರ್ ನಾಮಿನೇಷನ್‌ಗೆ ಪ್ರಕ್ರಿಯೆ ಶುರುವಾಗಿದ್ದು, ಸರ್ಕಾರದ ಆದೇಶದಂತೆ ಮೇ 28ಕ್ಕೆ ಫಿಲ್ಮ್ ಚೇಂಬರ್ ಎಲೆಕ್ಷನ್ ನಡೆಯಲಿದೆ. ಅಧ್ಯಕ್ಷ ಸ್ಥಾನಕ್ಕೆ ಮೊದಲ ಅಭ್ಯರ್ಥಿಯಾಗಿ ನಿರ್ಮಾಪಕ ಭಾ.ಹರೀಶ್ ನಾಮಪತ್ರ ಸಲ್ಲಿಸಿದ್ರೆ, 2ನೇ ಅಭ್ಯರ್ಥಿಯಾಗಿ ಸಾ.ರಾ ಗೋವಿಂದ್ ನಾಮಪತ್ರ ಸಲ್ಲಿಸಿದ್ದಾರೆ. ಕನ್ನಡ ಸಿನಿಮಾಗಳ ಶೀರ್ಷಿಕೆ ನೋಂದಣಿ ಸೇರಿದಂತೆ ಅನೇಕ ಕಾರ್ಯಗಳನ್ನು ಫಿಲ್ಮ್ ಚೇಂಬರ್ ಮಾಡುತ್ತದೆ. ಈ ಎಲ್ಲಾ ಕಾರಣದಿಂದ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಾಮುಖ್ಯತೆ ಪಡೆದುಕೊಂಡಿದೆ.