ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಬಂದ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳಿಗೆ ನೆರವಾಗಲು ಸರ್ಕಾರ 15 ಜಿಲ್ಲೆಗಳಿಗೆ ಒಟ್ಟಾಗಿ ತುರ್ತು 100 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.
ಅತಿ ಹೆಚ್ಚು ಹಾನಿಯಾಗಿರುವ ಬೆಳಗಾವಿಗೆ 25 ಕೋಟಿ ರೂ. ಬಿಡುಗಡೆ ಮಾಡಿದ್ದರೆ ಬಾಗಲಕೋಟೆ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ಅನುದಾನ ಬಿಡುಗಡೆಗೊಳಿಸಿ ಸರ್ಕಾರದ ಆದೇಶ ಹೊರಡಿಸಿದೆ.
Advertisement
Advertisement
ಪರಿಹಾರ ಕಾಮಗಾರಿಗೆ ಪ್ರಸಕ್ತ ವರ್ಷದ ಎನ್‌ಡಿಆರ್‌ಎಫ್ ನಿಧಿಯ ಎರಡನೇ ಕಂತು 126 ಕೋಟಿ ರೂ. ಹಣವನ್ನು ಬಿಡುಗಡೆ ಮಾಡುವಂತೆ ಸರ್ಕಾರ ಕೇಂದ್ರದಲ್ಲಿ ಮನವಿ ಮಾಡಿದೆ. ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಸಂಜೀವ್ ಕುಮಾರ್ ಜಿಂದಾಲ್ ಅವರಿಗೆ ರಾಜ್ಯ ಕಂದಾಯ ಇಲಾಖೆ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಪತ್ರ ಬರೆದಿದ್ದಾರೆ.
Advertisement
ಯಾವ ಜಿಲ್ಲೆಗೆ ಎಷ್ಟು ಕೋಟಿ ರೂ?
ಬೆಳಗಾವಿ 25 ಕೋಟಿ ರೂ., ಬಾಗಲಕೋಟೆ ಮತ್ತು ಉತ್ತರ ಕನ್ನಡ 10 ಕೋಟಿ ರೂ., ವಿಜಯಪುರ, ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ, ಧಾರವಾಡ, ಗದಗ, ಕಲಬುರಗಿಗೆ ತಲಾ 5 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ.