– ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿ ಕರೆದೊಯ್ದ ಪೊಲೀಸರು
ಬೆಂಗಳೂರು: ರಾಜ್ಯದ ನಿವೃತ್ತ ಡಿಜಿಪಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಕೊಲೆ ಆರೋಪಿ ಪಲ್ಲವಿ ಅವರನ್ನು ಸೋಮವಾರ ನ್ಯಾಯಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದರು. ಜರ್ಡ್ಜ್ ಜಿ.ಎ.ಲತಾದೇವಿ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.
ಮೇ 3ರ ವರೆಗೆ ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಪಲ್ಲವಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನ ಕಡೆಗೆ ಪೊಲೀಸರು ಕರೆದೊಯ್ದಿದ್ದಾರೆ.