ಬೆಂಗಳೂರು: ಗ್ಯಾರಂಟಿಗಳ (Guarantee Scheme) ಭಾರದಿಂದ ತತ್ತರಿಸಿರುವ ರಾಜ್ಯ ಸರ್ಕಾರ ಸಂಪನ್ಮೂಲಗಳ ಕ್ರೋಢೀಕರಣಕ್ಕಾಗಿ ಹೊಸ ಹೊಸ ಮಾರ್ಗಗಳನ್ನು ಹುಡುಕ್ತಿದೆ. ಅಕ್ರಮ ಕಲ್ಲುಗಣಿಗಾರಿಕೆ ನಡೆಸಿದವರು ಬಾಕಿ ಉಳಿಸಿಕೊಂಡ 6,105 ಕೋಟಿ ದಂಡ ಸಂಗ್ರಹಕ್ಕೆ ಒನ್‌ಟೈಮ್ ಸೆಟಲ್ಮೆಂಟ್ ಯೋಜನೆ (OTS Scheme) ತರೋದಕ್ಕೆ ಮುಂದಾಗಿದೆ.
ರಾಜಧನ ಮತ್ತು ದಂಡ ವಸೂಲಿ ಮಾಡಲು ಉಪಖನಿಜ (Submineral) ರಿಯಾಯ್ತಿ ಕಾಯ್ದೆಗೆ ತಿದ್ದುಪಡಿ ತರಲು ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಪ್ರತಿ ಟನ್‌ಗೆ 80 ರೂ. ರಾಜಧನ ನಿಗದಿ ಮಾಡಿದೆ. ಇದರಿಂದ ಸರ್ಕಾರ 311.55 ಕೋಟಿ ಹೆಚ್ಚುವರಿ ಸಂಗ್ರಹದ ನಿರೀಕ್ಷೆಯಲ್ಲಿದೆ. ಅಲ್ಲದೇ, ಪರವಾನಗಿ ಪಡೆಯದೇ ಹೆಚ್ಚುವರಿಯಾಗಿ ಸಾಗಿಸಿದ ಉಪಖನಿಜಕ್ಕೆ ದಂಡ ಹಾಕಲು ತೀರ್ಮಾನಿಸಿದೆ. ಇದನ್ನೂ ಓದಿ: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ನಿಯಮ ಸಡಿಲ – ಶೇ.25ರಷ್ಟು ವಿದ್ಯಾರ್ಥಿಗಳಿದ್ದರೂ ಮಾನ್ಯತೆ!
ಅಷ್ಟೇ ಅಲ್ಲ, ಖನಿಜಗಳನ್ನ ಹೊಂದಿರುವ ಭೂಮಿಗೆ ತೆರಿಗೆ ಹಾಕಲು ಸರ್ಕಾರದ ನಿರ್ಧಾರ ಮಾಡಿದೆ. ಜಮೀನಿನಲ್ಲಿ ಲಭ್ಯವಾಗುವ ಖನಿಜದ ಹಕ್ಕುಗಳು ಭೂಮಾಲಿಕನಿಗೆ ಸೇರುತ್ತದೆ. ಆದರೆ, 1 ಟನ್‌ಗೆ 100 ರೂ.ನಂತೆ ರಾಯಲ್ಟಿ ಹಾಕಲು ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ (HK Patil) ತಿಳಿಸಿದ್ದಾರೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್, ಇಂದಿನ ಸಭೆಯಲ್ಲಿ 20 ವಿಷಯಗಳ ಬಗ್ಗೆ ಚರ್ಚೆ ಮಾಡಿ ಅನುಮೋದನೆ ನೀಡಲಾಗಿದೆ. ಕಲ್ಲು ಗಣಿಗಳಲ್ಲಿನ ಕಲ್ಲುಗಳಿಗೆ ಒಂದು ಟನ್‌ಗೆ 70 ರೂ. ರಾಯಲ್ಟಿ ಇದೆ. ಅದನ್ನು ಹೆಚ್ಚಳ ಮಾಡಿ ಒಂದು ಟನ್‌ಗೆ 80 ರೂ.ಗೆ ನಿಗದಿ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: MSPಗೆ ಆಗ್ರಹಿಸಿ ದೆಹಲಿಗೆ ನುಗ್ಗಲು ಯತ್ನಿಸಿದ ರೈತರ ಮೇಲೆ ಅಶ್ರುವಾಯು ಪ್ರಯೋಗ
ಕೆಲವು ಗುತ್ತಿಗೆಯಿಂದ ಬರಬೇಕಾದ ಬಾಕಿ ಹಾಗೆ ಇದೆ. ಹಲವು ವರ್ಷಗಳಿಂದ ದಂಡ ವಸೂಲಿಯಾಗಿಲ್ಲ. ಕಳೆದ 6-7 ವರ್ಷಗಳಿಂದ ವಸೂಲಿಯಾಗಿಲ್ಲ. ಹಾಗಾಗಿ ಒನ್ ಟೈಮ್ ಸೆಟಲ್ಮೆಂಟ್‌ಗೆ ಅವಕಾಶ ಮಾಡಿಕೊಡಲಾಗಿದೆ. ಈ ಮೂಲಕ ದಂಡ ವಸೂಲಿ ಮಾಡಲು ನಿರ್ಧಾರ ಮಾಡಲಾಗಿದೆ. ಅಲ್ಲದೇ ಡಿಜಿಟಲೀಕರಣ ಮಾಡಿದ ಮೇಲೆ ಒತ್ತುವರಿ ಸಾಧ್ಯವಾಗಿಲ್ಲ. ಒಟಿಎಸ್ ಮೂಲಕ ದಂಡವಸೂಲಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.