– ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಖರೀದಿಗೆ ಅವಕಾಶ
– ಎಂಆರ್‌ಪಿ ಬೆಲೆಗಿಂತ ಹೆಚ್ಚಿಗೆ ಮಾರಾಟ ಮಾಡಿದ್ರೆ ಲೈಸನ್ಸ್ ರದ್ದು
ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ಸುಮಾರು ಒಂದೂವರೆ ತಿಂಗಳ ನಂತರ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಮೂಲಕ ಸರ್ಕಾರ ಮದ್ಯಪ್ರಿಯರಿಗೆ ಸಿಹಿ ಸುದ್ದಿ ನೀಡಿತ್ತು. ಇದೀಗ ಬಾರ್, ಕ್ಲಬ್‍ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಮೂಲಕ ಮತ್ತೆ ಎಣ್ಣೆಪ್ರಿಯರಿಗೆ ಸರ್ಕಾರ ಗುಡ್‍ನ್ಯೂಸ್ ನೀಡಿದೆ.
ಈ ಕುರಿತು ಅಬಕಾರಿ ಸಚಿವ ನಾಗೇಶ್ ಸುದ್ದಿಗೋಷ್ಠಿ ನಡೆಸಿದ್ದು, ಐದನೇ ದಿನಕ್ಕೆ 122.16 ಕೋಟಿ ತೆರಿಗೆ ಸಂಗ್ರಹ ಆಗಿದೆ. ಯಾಕೆಂದರೆ ಇಂದಿನಿಂದ ತೆರಿಗೆ ಅಧಿಕವಾಗಿದ್ದರಿಂದ ಆದಾಯವೂ ಹೆಚ್ಚಾಗಿದೆ. ಈ ಮೂಲಕ ಸರ್ಕಾರಕ್ಕೆ ಒಟ್ಟು 767 ಕೋಟಿ ಆದಾಯ ಬಂದಿದೆ. ಗಡಿಭಾಗದಲ್ಲಿ ಆಧಾರ್ ಪರೀಕ್ಷಿಸಿ ಮದ್ಯ ನೀಡಲು ಸೂಚನೆ ನೀಡಿದ್ದೆ. ಲಾಕ್‍ಡೌನ್ ಬಳಿಕ ಮದ್ಯದ ಅಂಗಡಿ ಓಪನ್ ಆದ ಬಳಿಕ ಮೊದಲು ನೂಕುನುಗ್ಗಲು ಉಂಟಾಗಿತ್ತು ಎಂದರು.
Advertisement
Advertisement
ನಾಳೆಯಿಂದ ಲಾಡ್ಜ್, ಬಾರ್, ಕ್ಲಬ್‍ಗಳಲ್ಲಿ ಮದ್ಯ ಮಾರಾಟ ಮಾಡಬಹುದು. ಬಾರ್ ಆ್ಯಂಡ್ ರೆಸ್ಟೋರೆಂಟ್, ಕ್ಲಬ್, ಮಾಲೀಕರು ನಮ್ಮಲ್ಲಿರುವ ಸ್ಟಾಕನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡಿದ್ದರು. ಈ ಬಗ್ಗೆ ಸಿಎಂ ಜೊತೆ ಮಾತನಾಡಿದ್ದೆ. ಹೀಗಾಗಿ ಇಂದು ಸಂಜೆಯಿಂದ ಅಥವಾ ನಾಳೆಯಿಂದ ಅವುಗಳು ಓಪನ್ ಆಗುತ್ತವೆ. ಬಾರ್, ಕ್ಲಬ್ ಮತ್ತು ಲಾಡ್ಜ್ ಗಳಲ್ಲೂ ಪಾರ್ಸಲ್‍ಗೆ ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಸಿಎಂ ಯಡಿಯೂರಪ್ಪ ಅನುಮತಿ ನೀಡಿದ್ದಾರೆ ಎಂದು ಹೇಳಿದರು.
Advertisement
Advertisement
ಬಾರ್ ಆ್ಯಂಡ್ ರೆಸ್ಟೋರೆಂಟ್, ಕ್ಲಬ್, ಸಿಎಲ್7, ಸಿಎಲ್4, ಸಿಎಲ್‍ವೈನ್ ಈ ಲೈಸನ್ಸ್ ಇರುವವರು ಓಪನ್ ಮಾಡಬಹುದು. ಎಂಆರ್‌ಪಿ ಬೆಲೆಗೆ ಮಾತ್ರ ಮಾರಾಟ ಮಾಡಬೇಕು. ಎಂಆರ್‌ಪಿ ಬೆಲೆಗಿಂತ ಹೆಚ್ಚಿಗೆ ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲಾಗುತ್ತಿದೆ. ಇದರ ಜವಾಬ್ದಾರಿ ಮಾಲೀಕರ ಮೇಲಿರುತ್ತದೆ. ಖರೀದಿ ಸಮಯ ಬೆಳಗ್ಗೆ 9 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ಇರುತ್ತದೆ.
ಸುಪ್ರೀಂಕೋರ್ಟ್ ನೀಡಿದ ಆದೇಶ ನೋಡಿಲ್ಲ. ಆನ್‍ಲೈನ್ ಮಾರಾಟಕ್ಕೆ ಅವಕಾಶ ನೀಡಿದರೆ ತಪ್ಪಿಲ್ಲ. ಮೊದಲಿಂದಲೂ ಆ ಬಗ್ಗೆ ಚರ್ಚೆ ಇತ್ತು. ಪ್ರತಿವರ್ಷ ಅಬಕಾರಿ ಆದಾಯ ಸರ್ಕಾರಕ್ಕೆ 25 ಸಾವಿರ ಕೋಟಿ ಬರಲಿದೆ. ಈ ವರ್ಷ 2,500 ಕೋಟಿ ಹೆಚ್ಚಾಗಲಿದೆ ಎಂದರು.