ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠಕ್ಕೆ(Chitradurga Muruga Mutt) ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್(Vastrad) ಅವರನ್ನು ಆಡಳಿತಾಧಿಕಾರಿಯನ್ನಾಗಿ(Administrator) ನೇಮಿಸಿದೆ.
ಲೆಕ್ಕಪತ್ರ ನಿರ್ವಹಣೆ, ಮಠದ ಚರ ಹಾಗೂ ಸ್ಥಿರಾಸ್ತಿ ಹಿತದೃಷ್ಟಿಯಿಂದ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಸರ್ಕಾರ ಅಡ್ವೋಕೇಟ್ ಜನರಲ್ ಅಭಿಪ್ರಾಯ ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿ ವರದಿಯನ್ನು ಪರಿಶೀಲಿಸಿ ಈ ನಿರ್ಧಾರ ಕೈಗೊಂಡಿದೆ.
Advertisement
ಇನ್ನು ಮುಂದೆ ಮುರುಘಾ ಮಠದ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆಯ ಜವಾಬ್ದಾರಿಯನ್ನು ಆಡಳಿತಾಧಿಕಾರಿ ನೋಡಿಕೊಳ್ಳಲಿದ್ದಾರೆ. ಇದನ್ನೂ ಓದಿ: ಭಾರತ – ಚೀನಾ ಸಂಘರ್ಷಕ್ಕೆ ಮೂಲ ಕಾರಣ ನೆಹರೂ – ಸಿ.ಟಿ ರವಿ
Advertisement
Advertisement
ಜಿಲ್ಲಾಧಿಕಾರಿಗಳ ವರದಿಯಲ್ಲಿ ಏನಿತ್ತು?
ಶಿವಮೂರ್ತಿ ಮುರುಘಾ ಶರಣರು ಸೆ.1 ರಿಂದ ನ್ಯಾಯಾಂಗ ಬಂಧನದಲ್ಲಿರುವುದರಿಂದ ಮಠದ ಒಟ್ಟು ಸ್ಥಿರಾಸ್ತಿಗೆ ಮತ್ತು ಮಠದ ಹಣಕಾಸು ನಿರ್ವಹಣೆಯನ್ನು ನೋಡಿಕೊಳ್ಳುವುದು ಕಷ್ಟಕರವಾಗಿರುತ್ತದೆ. ಈ ಟ್ರಸ್ಟ್ ಸಾರ್ವಜನಿಕ ಟ್ರಸ್ಟ್ ಆಗಿರುವುದರಿಂದ ಆಸ್ತಿಗಳ ನಿರ್ವಹಣೆಗಳ ತೊಡಕುಂಟಾಗುತ್ತಿದೆ
Advertisement
ದುರಾಡಳಿತ ಹಾಗೂ ಹಣಕಾಸು ದುರುಪಯೋಗ ಆದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ದಕ್ಕೆಯಾಗುವ ಸಂಭವ ಇರುತ್ತದೆ. ಆದ ಕಾರಣ ಟ್ರಸ್ಟ್ ಮತ್ತು ವಿದ್ಯಾಸಂಸ್ಥೆಯ ನಿರ್ವಹಣೆಗೂ ಸಹ ತೊಂದರೆ ಉಂಟಾಗುತ್ತದೆ. ಈ ಸಂಸ್ಥೆಗೆ ಶ್ರೀ ಶಿವಮೂರ್ತಿ ಮುರುಘಾ ಶರಣರು ಮಠದ ಜೀವ ಪೀಠಾಧಿಪತಿ ಹಾಗೂ ವಿದ್ಯಾ ಸಂಸ್ಥೆಗೆ ಅಜೀವ ಅಧ್ಯಕ್ಷರು ಆಗಿರುವುದರಿಂದ ಮಠದ ಹಾಗೂ ವಿದ್ಯಾ ಸಂಸ್ಥೆಗಳ ಅನಾನುಕೂಲಗಳನ್ನು ತಪ್ಪಿಸಲು ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ವರದಿಯಲ್ಲಿ ತಿಳಿಸಿದ್ದರು.