ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಂಪುಟ ಸಭೆ ಇಂದು ನಡೆಯಲಿದ್ದು, ಸಭೆಯಲ್ಲಿ ಹಲವು ಪ್ರಮುಖ ವಿಷಯಗಳು ಚರ್ಚೆ ಬರುವ ಸಾಧ್ಯತೆಗಳಿವೆ. ಅಲ್ಲದೇ ರಾಜ್ಯದ ರೈತರಿಗೆ ವರಮಹಾಲಕ್ಷ್ಮಿ ಹಬ್ಬಕ್ಕೆ ಮತ್ತೊಂದು ಸಿಹಿ ಸುದ್ದಿ ನೀಡಲಿದೆ ಎನ್ನಲಾಗಿದೆ.
ಈಗಾಗಲೇ ಸಹಕಾರ ಬ್ಯಾಂಕ್‍ಗಳಲ್ಲಿನ ರೈತರ ಸಾಲಮನ್ನಾ ಮಾಡಿರುವ ಸರ್ಕಾರ, ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ಸಾಲವನ್ನೂ ಮನ್ನಾ ಮಾಡುವುದಾಗಿ ಘೋಷಿಸಿತ್ತು. ಇಂದು ಸಂಜೆ 4 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ಗಳ ಸಾಲಮನ್ನಾಕ್ಕೆ ಸಮ್ಮತಿ ಸಿಗಲಿದೆ ಎನ್ನಲಾಗಿದೆ. ಇದರ ಜೊತೆಗೆ, ಕೊಡಗಿನ ನೆರೆ ಸಂತ್ರಸ್ತರಿಗೆ ಪರಿಹಾರ, ಪುನರ್ ನಿರ್ಮಾಣದ ಅನುದಾನದ ಬಗ್ಗೆಯೂ ಘೋಷಣೆಯಾಗುವ ಸಾಧ್ಯತೆ ಇದೆ.
ಇತ್ತ ಕೇರಳ ರಾಜ್ಯ ಸರ್ಕಾರ ಪ್ರವಾಹದಲ್ಲಿ ಸಿಲುಕಿರುವ ಅಲ್ಲಿನ ಸಂತ್ರಸ್ತರ ಸಹಾಯಕ್ಕೆ ಬಂದಿದ್ದು, ಸಿಎಂ ಪಿಣರಾಯಿ ವಿಜಯನ್ ಪ್ರವಾಹ ಸಂತ್ರಸ್ತರಿಗೆ 1 ಲಕ್ಷ ರೂ. ವರೆಗೂ ಬಡ್ಡಿ ರಹಿತ ಸಾಲ ಘೋಷಣೆ ಮಾಡಿದ್ದಾರೆ. ಕುಟುಂಬದ ಒಬ್ಬರಿಗೆ 1 ಲಕ್ಷ ರೂ. ಇದು ಅನ್ವಯವಾಗಲಿದ್ದು, ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಅನುಕೂಲವಾಗಲಿದೆ. ಇದರೊಂದಿಗೆ ಸದ್ಯ ರಾಜ್ಯ ಸರ್ಕಾರದ ಮೇಲೂ ನಿರೀಕ್ಷೆ ಹೆಚ್ಚಾಗಿದ್ದು, ಕೊಡಗಿನ ಪ್ರವಾಹ ಸಂತ್ರಸ್ತರಿಗೂ ಬಡ್ಡಿ ರಹಿತ ಘೋಷಣೆ ಮಾಡಿ ಸರ್ಕಾರ ನೆರವು ನೀಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv