ಬೆಂಗಳೂರು: ರಾಜ್ಯದಲ್ಲಿ ನೈಟ್ ಕರ್ಫ್ಯೂ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ಅಕ್ಟೋಬರ್ 1ರಿಂದ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಗೆ ಅನುಮತಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತಜ್ಞರ ಜೊತೆಗೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಅವಧಿಯನ್ನು ರಾತ್ರಿ 10 ರಿಂದ ಬೆಳಗ್ಗಿನ ಜಾವ 5 ರವರೆಗೆ ನಿಗದಿಗೊಳಿಸಲಾಗಿದೆ.
Advertisement
Advertisement
ಅಕ್ಟೋಬರ್ 3ರಿಂದ ಪಬ್ ಹಾಗೂ ಕ್ಲಬ್ ಗಳಿಗೆ ಅನುಮತಿ ನೀಡಲಾಗುತ್ತದೆ. ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಪಾಸಿಟಿವಿಟಿ ಸರಾಸರಿ ದರ ಶೇ.0.66 ಇದೆ. ಅಕ್ಟೋಬರ್ 1ರಿಂದ ಕೋವಿಡ್ ಪಾಸಿಟಿವ್ ದರ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ನಿಡಲಾಗುವುದು.
Advertisement
ಪಾಸಿಟಿವಿಟಿ ದರ ಶೇ.1ಕ್ಕಿಂತ ಜಾಸ್ತಿ ಆದರೆ ಶೇ.50ರಷ್ಟು ಸೀಟು ಭರ್ತಿ ಹಾಗೂ ಶೇ.2ಕ್ಕಿಂತ ಜಾಸ್ತಿಯಾದರೆ ಚಿತ್ರ ಮಂದಿರ ಬಂದ್ ಮಾಡಲಾಗುವುದು. ಇದೇ ಮಾನದಂಡ ಪಬ್ ಗಳಿಗೂ ಅನ್ವಯವಾಗಲಿದೆ ಎಂದು ಸಿಎಂ ಮಾಹಿತಿ ನಿಡಿದರು.
Advertisement
ಕನಿಷ್ಠ 1 ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶ ಅವಕಾಶ ನೀಡಲಾಗುವುದು. ಗರ್ಭಿಣಿಯರು ಮತ್ತು ಮಕ್ಕಳಿಗೆ ಅವಕಾಶ ನೀಡದಿರಲು ಸಭೆಯಲ್ಲಿ ನಿರ್ಧರಿಸಲಾಯಿತು. ಇದನ್ನೂ ಓದಿ: ನಟ ದುನಿಯಾ ವಿಜಯ್ ನೋಡಲು ಮುಗಿಬಿದ್ದ ಅಭಿಮಾನಿಗಳು!
6ರಿಂದ 12ನೇ ತರಗತಿಯವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ ನೀಡಲು ನಿರ್ಧರಿಸಿದ್ದು, ವಾರದಲ್ಲಿ 5 ದಿನ ಅಂದರೆ ಸೋಮವಾರದಿಂದ ಶುಕ್ರವಾರವದರೆಗೆ ಶಾಲಾ-ಕಾಲೇಜುಗಳನ್ನು ನಡೆಸಲು ನಿರ್ಧರಿಸಲಾಯಿತು.
ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಿ ಜನರಲ್ಲಿ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಯಿತು. ಅಲ್ಲದೆ ಗಡಿ ಭಾಗದಲ್ಲಿ ಹೆಚ್ಚು ನಿಗಾವಹಿಸಲು ಸೂಚಿಸಿರುವುದಾಗಿ ಸಿಎಂ ಹೇಳಿದರು. ಇದನ್ನೂ ಓದಿ: ಆಶ್ರಯ ನೀಡಿದ ಅಭಿಮಾನಿಯೊಂದಿಗೆ ಕಿರಿಕ್- ಮನೆ ಬಿಟ್ಟು ಬಂದ ನಟಿ ವಿಜಯಲಕ್ಷ್ಮಿ
ದಸರಾ ಆಚರಣೆ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವುದಾಗಿ ಸಿಎಂ ಇದೇ ವೇಲೆ ಹೇಳಿದರು. ಸ್ವಿಮ್ಮಿಂಗ್ ಪೂಲ್ ಗೆ ಈಗ ಇರುವ ಮಾರ್ಗಸೂಚಿಗಳು ಯಥಾಸ್ಥಿತಿ ಅನ್ವಯವಾಗಲಿದೆ.