ಬೆಂಗಳೂರು: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಅಭಿಯಾನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಬೆಂಬಲ ವ್ಯಕ್ತ ಪಡಿಸಿದ್ದಾರೆ.
Advertisement
ಟ್ವೀಟ್‍ನಲ್ಲಿ ಏನಿದೆ?
ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರ್ಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟಿಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ. ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂಬುದು ನನ್ನ ಆಗ್ರಹ. ಇದನ್ನೂ ಓದಿ: ಜಮೀರ್ ಅಹ್ಮದ್‍ಖಾನ್ ಸಿಎಂ ಆಗ್ತಾರೆ – ವಿರಕ್ತಮಠದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳಿಂದ ಭವಿಷ್ಯ
Advertisement
ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ & ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ @BJP4Karnataka ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು. 1/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 25, 2022
Advertisement
ರಾಜ್ಯದಲ್ಲಿ ಇನ್ನೆಷ್ಟು ಅಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ ಬಿಜೆಪಿ ಸರ್ಕಾರ ಕಣ್ತೆರೆಯಲೇಬೇಕು. ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜೊತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರ್ಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ಟ್ವೀಟ್ ಮಾಡಿ ಯಾವ ಜಿಲ್ಲೆಯಲ್ಲಿ ಆಸ್ಪತ್ರೆ ಇಲ್ಲವೋ ಕೂಡಲೇ ಅಲ್ಲಿ ಆಸ್ಪತ್ರೆ ನಿರ್ಮಾಣ ಮಾಡುವಂತೆ ಎಚ್‍ಡಿಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮೇಕೆದಾಟು ಡ್ಯಾಂಗೆ ತಮಿಳುನಾಡು ವಿರೋಧ – ಸುಪ್ರೀಂಕೋರ್ಟ್‍ನಲ್ಲಿ ಇಂದು ವಿಚಾರಣೆ