ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಎಂದು ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ (Thaawarchand Gehlot) ಅವರಿಗೆ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಸಿಎಲ್ಪಿ ಸಭೆ ನಡೆಸಿದ ಬಳಿಕ ರಾಜಭವನಕ್ಕೆ ‘ಕೈ’ ನಾಯಕರು ತೆರಳಿದರು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ (DK Shivakumar) ಅವರು ರಾಜ್ಯಪಾಲರಿಗೆ ಸರ್ಕಾರ ರಚನೆ ಹಕ್ಕು ಮಂಡಿಸಿದರು. ಇವರಿಗೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಶಾಸಕ ರಾಮಲಿಂಗ ರೆಡ್ಡಿ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಸಾಥ್ ನೀಡಿದರು. ಇದನ್ನೂ ಓದಿ: ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದು ಆಯ್ಕೆ – ಸಿದ್ದರಾಮಯ್ಯ ಸಿಎಂ ಎಂದು ಘೋಷಿಸಿದ ಡಿಕೆಶಿ
Advertisement
Advertisement
ಕರ್ನಾಟಕ ಸಿಎಂ ಗಾದಿಗಾಗಿ ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಹೈಡ್ರಾಮ ನಡೆದಿತ್ತು. ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ಪಟ್ಟು ಹಿಡಿದಿದ್ದರು. ಹೈಕಮಾಂಡ್ ಎಷ್ಟು ಮನವೊಲಿಸಿದರೂ ಬಗ್ಗಿರಲಿಲ್ಲ. ಕೆಲ ಷರತ್ತುಗಳೊಂದಿಗೆ ಕೊನೆಗೂ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಡಿಕೆಶಿ ಒಪ್ಪಿಗೆ ಸೂಚಿಸಿದರು. ತಾವು ಡಿಸಿಎಂ ಪಟ್ಟ ಪಡೆದರು.
Advertisement
Advertisement
ಅತ್ತ ಸಿದ್ದರಾಮಯ್ಯ ಸಿಎಂ ಎಂಬುದು ಖಚಿತವಾಗುತ್ತಿದ್ದಂತೆ ಇತ್ತ ಡಾ. ಪರಮೇಶ್ವರ್ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರ ಮುಂದೆ ಸರ್ಕಾರ ರಚನೆ ಕುರಿತು ಮಾಹಿತಿ ನೀಡಿದರು. ಇದೇ ಮೇ 20 ರಂದು ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ನಾಯಕರು ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನೂ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ: ನೂತನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಶುಭಕೋರಿದ ಮಾಜಿ ಸಿಎಂ ಬೊಮ್ಮಾಯಿ