– ವಿಶೇಷ ತನಿಖಾ ತಂಡದಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳು
ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ (SIT) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Advertisement
ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ ಮರುದಿನವೇ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: Prajwal Revanna Case: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಕೆಲವೇ ಹೊತ್ತಲ್ಲಿ ಎಸ್‌ಐಟಿ ರಚನೆ: ಪರಮೇಶ್ವರ್
Advertisement
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರಿನ ಎಡಿಜಿಪಿ ಬಿಜಯಕುಮಾರ್ ಸಿಂಗ್, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ. ಪನ್ನೇಕರ್ ಹಾಗೂ ಮೈಸೂರು ಎಸ್ಪಿ ಸೀಮಾ ಲಾಠ್ಕರ್ ಅವರನ್ನೊಳಗೊಂಡ ತಂಡವನ್ನು ರಚಿಸಿದೆ. ಬಿಜಯ ಕುಮಾರ್ ಸಿಂಗ್ ತಂಡದ ಮುಖ್ಯಸ್ಥರಾಗಿರುತ್ತಾರೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಅಂಬಿಕಾ ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ – ತನಿಖಾ ವರದಿ ಬಂದ ಮೇಲೆ ಮಾತನಾಡ್ತೀನಿ ಎಂದ ಹೆಚ್‌ಡಿಕೆ
Advertisement
ಆದೇಶ ಪ್ರತಿಯಲ್ಲಿ ಏನಿದೆ?
ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವೀಡಿಯೋಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ವೀಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕವಾಗಿ ಹರಿಬಿಟ್ಟ ವ್ಯಕ್ತಿಗಳನ್ನು ಪತ್ತೆ ಹಚ್ಚಿ ತನಿಖೆಗೆ ಒಳಪಡಿಸುವುದು ಮತ್ತು ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡ ರಚಿಸಲಾಗಿದೆ.
ವಿಶೇಷ ತನಿಖಾ ತಂಡವು ರಾಜ್ಯದ ಇತರೇ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಮತ್ತು ದಾಖಲಾಗಬಹುದಾದ ಪ್ರಕರಣಗಳನ್ನು ಎಸ್‌ಐಟಿಗೆ ವರ್ಗಾಯಿಸಬೇಕು. ಎಸ್‌ಐಟಿಗೆ ತನಿಖೆ ನಡೆಸಲು ಇತರೇ ಸದಸ್ಯರ ಅವಶ್ಯಕತೆಯಿದ್ದಲ್ಲಿ ಡಿಜಿ ಮತ್ತು ಐಜಿಪಿ ಅವರ ಅನುಮೋದನೆಯೊಂದಿಗೆ ತನಿಖಾ ತಂಡಕ್ಕೆ ಸೇರಿಸಿಕೊಳ್ಳಬಹುದು. ಅಲ್ಲದೇ ವಿಶೇಷ ತನಿಖಾ ತಂಡವು ಸಿಐಡಿಯಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಸಮಗ್ರ ತನಿಖೆ ನಡೆಸಬೇಕು. ತನಿಖಾ ವರದಿಯನ್ನು ಪೊಲೀಸ್ ಮಹಾನಿರ್ದೇಶಕರ ಮೂಲಕ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಆದ್ರೆ ತನಿಖಾ ವರದಿಯಲ್ಲಿ ಸಲ್ಲಿಸಲು ಡೆಡ್‌ಲೈನ್ ಫಿಕ್ಸ್ ಮಾಡಿಲ್ಲ. ಇದನ್ನೂ ಓದಿ: ಕಾಂಗ್ರೆಸ್‌ನ ತುಷ್ಟೀಕರಣದ ರಾಜಕೀಯದಿಂದ ಆದಿವಾಸಿ ಮಹಿಳೆ ಮೇಲೆ ದೌರ್ಜನ್ಯ, ನೇಹಾ ಹತ್ಯೆ: ಮೋದಿ
ಸಂತ್ರಸ್ತೆಯಿಂದ ಪ್ರಜ್ವಲ್ ವಿರುದ್ಧ ದೂರು:
ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆಯಿಂದ ದೂರು ದಾಖಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 354 (ಎ) ಲೈಂಗಿಕ ಕಿರುಕುಳ, 354 (ಡಿ) (ಮಹಿಳೆಗೆ ಮುಜುಗರ ಆಗುವಂತೆ ಹಿಂಬಾಲಿಸುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ ಉಂಟುಮಾಡುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣದ ಸಮಗ್ರ ತನಿಖೆಯನ್ನೂ ನಿರ್ವಹಿಸುವಂತೆ ಎಸ್‌ಐಟಿಗೆ ಆದೇಶಿಸಿದೆ.