– ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಬಿಗಿ ಪಟ್ಟು
ಬೆಂಗಳೂರು: ವಿಧಾನ ಮಂಡಲದ ಅಧಿವೇಶನದಲ್ಲಿ ಸಚಿವ ಬಿ. ನಾಗೇಂದ್ರ (B Nagendra) ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳು 5 ದಿನಗಳಿಂದ ಹೋರಾಟ ಮಾಡ್ತಿವೆ. ಇದರ ಮಧ್ಯೆಯೇ ನಾಗೇಂದ್ರ ಅವರಿಗೆ ರಾಜ್ಯ ಸರ್ಕಾರ ಮತ್ತೊಂದು ಇಲಾಖೆ ಜವಾಬ್ದಾರಿ ಕೊಟ್ಟಿದೆ.
ಯೋಜನೆ ಮತ್ತು ಸಾಂಖ್ಯಿಕ ಖಾತೆ ಜೊತೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯದ ಜವಾಬ್ದಾರಿಯನ್ನೂ ನಾಗೇಂದ್ರ ಅವರ ಹೆಗಲಿಗೆ ಸಿಎಂ ಹಾಕಿದ್ದಾರೆ.

ಈ ಇಲಾಖೆ ಸಂಬಂಧ ವಿಧಾನ ಪರಿಷತ್ ನಲ್ಲಿ ಸಚಿವ ನಾಗೇಂದ್ರ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಪ್ರಶ್ನೆಗೆ ಲಿಖಿತ ಮೂಲಕ ಉತ್ತರ ನೀಡಿದ್ದಾರೆ. 2025 ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ ರಚಿಸಲಾಗಿದೆ. ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರೇ ಈ ಸಚಿವಾಲಯದ ಸಚಿವರೂ ಆಗಿರುತ್ತಾರೆ ಎಂದಿದ್ದಾರೆ.
ಒಟ್ಟು 16 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯಕ್ಕೆ ಮೀಸಲಿಟ್ಟಿದೆ ಅಂತ ಉತ್ತರ ನೀಡಿದ್ದಾರೆ.

