ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.
ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ…
— Siddaramaiah (@siddaramaiah) April 27, 2024
Advertisement
ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಳಗಾವಿಗೆ ಬಂದಿಳಿದ ಪ್ರಧಾನಿ ಮೋದಿ
Advertisement
Advertisement
ಈ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.