ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯು ಕಿಡ್ನಿ ಕಸಿ ಮಾಡಲು ಅನುಮತಿಯನ್ನು ಪಡೆದ ರಾಜ್ಯದ ಮೊದಲ ಆಸ್ಪತ್ರೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
Advertisement
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಈ ಭಾಗದ ರೋಗಿಗಳು ಕಿಡ್ನಿ ಕಸಿ ಮಾಡಿಸಿಕೊಳ್ಳಲು, ಬೆಂಗಳೂರು, ಮುಂಬೈನಂತ ಮಹಾನಗರಗಳಿಗೆ ಹೋಗುವ ಅನಿವಾರ್ಯತೆ ಈ ಹಿಂದಿತ್ತು. ಜೊತೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಲಕ್ಷಾಂತರ ರೂ. ಖರ್ಚು ಮಾಡಬೇಕಿತ್ತು. ಹೀಗೆ ಮಾಡಲು ಶಕ್ತರಿಲ್ಲದವರು, ಸಕಾಲಕ್ಕೆ ಚಿಕಿತ್ಸೆ ಪಡೆಯದೆ ಸಾವಿಗೀಡಾದ ಉದಾಹರಣೆಗಳಿವೆ. ಇದನ್ನೂ ಓದಿ: ಆರ್‌ಸಿಬಿ ಅಭಿಮಾನಿಗೆ ಪ್ರಪೋಸ್ ಮಾಡಿ ಮನಗೆದ್ದ ಹುಡುಗಿ – ನೆಟ್ಟಿಗರು ಫುಲ್ ಆಕ್ಟಿವ್
Advertisement
Advertisement
ಈ ದಿಸೆಯಲ್ಲಿ ಕಿಮ್ಸ್ ಆಡಳಿತ ಮಂಡಳಿ, ಕಿಮ್ಸ್‍ನಲ್ಲಿಯೇ ಕಿಡ್ನಿ ಕಸಿ ಮಾಡಲು ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಕಿಮ್ಸ್ ಮನವಿಯನ್ನು ಒಪ್ಪಿಕೊಂಡ ಸರ್ಕಾರ, ಕಳೆದ ಫೆಬ್ರವರಿ 18ಕ್ಕೆ ಕಿಡ್ನಿ ಕಸಿಗೆ ಅನುಮತಿ ನೀಡಿದೆ. ಈ ಮೂಲಕ ಕಿಡ್ನಿ ಕಸಿಗೆ ಅನುಮತಿ ಪಡೆದ ರಾಜ್ಯದ ಏಕೈಕ ಸರ್ಕಾರಿ ಮೆಡಿಕಲ್ ಕಾಲೇಜು ಎಂಬ ಹೆಗ್ಗಳಿಕೆಗೆ ಕಿಮ್ಸ್ ಪಾತ್ರವಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬ್ರಾಹ್ಮಣರನ್ನು ಸಿಎಂ ಆಗಿ ನೋಡಲು ಬಯಸುತ್ತೇನೆ: ರಾವ್‍ಸಾಹೇಬ್ ಪಾಟೀಲ್ ದಾನ್ವೆ
Advertisement
ಇಷ್ಟು ದಿನ ಸರಿಯಾದ ಚಿಕಿತ್ಸೆಯಿಲ್ಲದೆ ಕಿಡ್ನಿ ಸೋಂಕಿನಿಂದ ಬಳಲಿ ಸಾವನ್ನಪ್ಪುತಿದ್ದ ಬಡ ರೋಗಿಗಳ ಪಾಲಿಗೆ ಕಿಮ್ಸ್ ಮತ್ತೊಂದು ಸಂಜೀವಿನಿಯಾಗಿದೆ.