ಬೆಂಗಳೂರು: ಕಾಂಗ್ರೆಸ್ (Congress) ಪಾಲಿಗೆ ಕರ್ನಾಟಕ ಸರ್ಕಾರ (Karnataka Government) ಖಜಾನೆಯಾಗಿದೆ. ರಾಜ್ಯದಲ್ಲಿ ಬರೀ ವೈಎಸ್‍ಟಿ (YST) ಅಲ್ಲ, ವಿಎಸ್‍ಟಿಯೂ (VST) ಇದೆ ಎಂದು ಪರಿಷತ್ ಬಿಜೆಪಿ (BJP) ಸದಸ್ಯ ರವಿಕುಮಾರ್ (Ravikumar) ಸರ್ಕಾರದ ವಿರುದ್ಧ ಕಿಡಿಕಾರಿದರು.
ರಾಜ್ಯದಲ್ಲಿ ವೇಣುಗೋಪಾಲ್-ಸಿದ್ದರಾಮಯ್ಯ ಟ್ಯಾಕ್ಸ್ (Venugopal-Siddaramaiah Tax) ಇದೆ. ವಿಎಸ್‍ಟಿಯನ್ನು ವೇಣುಗೋಪಾಲ್ ಸಂಗ್ರಹಿಸುತ್ತಾರೆ. ಇದು ವಿಎಸ್‍ಟಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಮ್ಮಿಶ್ರ ಸರ್ಕಾರದಲ್ಲಿ ನನಗೆ ವರ್ಗಾವಣೆ ಮಾಡೋ ಅಧಿಕಾರವೇ ಇರಲಿಲ್ಲ – ಹೆಚ್‌ಡಿಕೆ
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಅಧಿಕೃತವಾಗಿ ಮತ್ತು ಅನಧಿಕೃತವಾಗಿ ವಸೂಲಿ ಮಾಡುವ ತೆರಿಗೆ ಕುರಿತು ಕುಮಾರಸ್ವಾಮಿ ಅವರಿಗೆ ಗೊತ್ತಿದೆ. ಸಿದ್ದರಾಮಯ್ಯನವರು ದೇವೇಗೌಡರ, ಕುಮಾರಸ್ವಾಮಿಯವರ ಜೊತೆಗೆ ಇದ್ದವರು. ಜೆಡಿಎಸ್‍ನಲ್ಲಿ (JDS) ಹಿಂದೆ ಇದ್ದವರು. ಹಾಗಾಗಿ ಸಿದ್ದರಾಮಯ್ಯ ಏನೆಂದು ಅವರಿಗೆ ಚೆನ್ನಾಗಿ ಗೊತ್ತಿದೆ. ವೈಎಸ್‍ಟಿ ವಿಷಯ ತಿಳಿಸಿದ ಕುಮಾರಸ್ವಾಮಿಯವರಿಗೆ ಅಭಿನಂದನೆಗಳು ಎಂದು ತಿಳಿಸಿದರು.
ಸಿದ್ದರಾಮಯ್ಯರು ಹಾಕಿದ ತೆರಿಗೆಯನ್ನು ಯತೀಂದ್ರರು (Yathindra Siddaramaiah) ವಸೂಲಿ ಮಾಡುತ್ತಿದ್ದಾರೆ. ಮೈಸೂರು, ಹುಬ್ಬಳ್ಳಿ ಮತ್ತಿತರ ಕಡೆ ಹಾಗೂ ರಾಜ್ಯದ ವಿವಿಧೆಡೆ ಇದರ ಕುರಿತು ಮಾತನಾಡುತ್ತಿದ್ದಾರೆ. ವೈಎಸ್‍ಟಿ, ವಿಎಸ್‍ಟಿ ಬಗ್ಗೆ ಜನರು ಜಾಗೃತರಾಗಬೇಕೆಂದು ಅವರು ಮನವಿ ಮಾಡಿದರು.
ಇಲ್ಲಿ ಸಿದ್ದರಾಮಯ್ಯರು ವಿಧಿಸಿದ ತೆರಿಗೆಯನ್ನು ವೇಣುಗೋಪಾಲ್ ಡ್ರಾ ಮಾಡುತ್ತಾರೆ. ಕಾಂಗ್ರೆಸ್ ಪಾಲಿಗೆ ಕರ್ನಾಟಕ ಸರಕಾರ ಖಜಾನೆ ಇದ್ದಂತೆ ಎಂದು ಟೀಕಿಸಿದರು.
Web Stories