ಬೆಂಗಳೂರು: ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ವಿರುದ್ಧ ರಾಜ್ಯ ಸರ್ಕಾರ ತನಿಖೆಗೆ ಮುಂದಾಗಿದೆ.
ಚಿಲುಮೆ (Chilume) ಸಂಸ್ಥೆಗೆ ಮತದಾರ ಖಾಸಗಿ ಮಾಹಿತಿ ಸಂಗ್ರಹಕ್ಕೆ ಅವಕಾಶ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ತನಿಖೆ ನಡೆಸಲು ಸೂಚಿಸಿದ್ದಾರೆ.
ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು (Ramesh Babu) ಅವರು ಬರೆದ ಪತ್ರದ ಮೇರೆಗೆ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ತನಿಖೆ ನಡೆಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಈಗ ಮುಖ್ಯ ಕಾರ್ಯದರ್ಶಿಗಳು ಪರಿಶೀಲನೆ ನಡೆಸಿ ವರದಿ ನೀಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಗಲಭೆಗೆ ಟ್ವಿಸ್ಟ್ – ರಾಗಿಗುಡ್ಡದ ಗಲಾಟೆ ಪೂರ್ವನಿಯೋಜಿತ?
ಖಾಸಗಿ ಸಂಸ್ಥೆಯಾದ ಚಿಲುಮೆಗೆ ಮತದಾರರ ಖಾಸಗಿ ವಿಷಯ ಸಂಗ್ರಹಣೆಗೆ ಅವಕಾಶ ನೀಡಿ, ಕರ್ತವ್ಯಲೋಪ ಎಸಗಿರುವ ಸಂಬಂಧ ಹಾಗೂ ಚಿಲುಮೆ ಸಂಸ್ಥೆಯ ಲೋಪದ ಬಗ್ಗೆ ಪೂರ್ಣ ಪ್ರಮಾಣದ ತನಿಖೆ ನಡೆಸುವಂತೆ ರಮೇಶ್ ಬಾಬು ಜುಲೈ 3 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]