– ರಾಜ್ಯದಲ್ಲಿ ಗ್ಯಾರಂಟಿಗಳು ನಿಲ್ಲುವುದಿಲ್ಲ
ಉಡುಪಿ: ಪಂಚ ಗ್ಯಾರಂಟಿಗಳಿಗೆ ಕರ್ನಾಟಕ ಸರ್ಕಾರವೇ ಮಾದರಿ ಎಂದು ಶಕ್ತಿ ಯೋಜನೆ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
Advertisement
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪೂರ್ವ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಪಂಚ ಗ್ಯಾರಂಟಿಗಳಿಗೆ ಕರ್ನಾಟಕ ಸರ್ಕಾರವೇ ಮಾದರಿ. ಈ ಮಾದರಿಯನ್ನು ಇಡೀ ದೇಶದಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಶಕ್ತಿ ಯೋಜನೆ ಬಗ್ಗೆ ಯಾವುದೇ ಗೊಂದಲ ಬೇಡ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಾಲೋಚನೆ ಇಟ್ಟುಕೊಂಡೆ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಮಹಿಳೆಯರ ಆರ್ಥಿಕ ಸಬಲೀಕರಣ ಮಾಡಲು ಜಾರಿಗೆ ತಂದಿದ್ದೇವೆ. ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಈ ಯೋಜನೆಗಳು ಜಾರಿಯಾಗಿವೆ ಎಂದು ಸ್ಪಷ್ಟನೆ ನೀಡಿದರು.ಇದನ್ನೂ ಓದಿ: Haveri| ವಕ್ಫ್ ಆಸ್ತಿ ಗಲಾಟೆ- 28ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು
Advertisement
Advertisement
ಡಿಕೆ ಶಿವಕುಮಾರ್ ಅವರನ್ನು ನಾವು ಇವತ್ತು ನೋಡುತ್ತಿಲ್ಲ. ಡಿಕೆಶಿ ಅಧ್ಯಕ್ಷರಾದಾಗ ಕೋವಿಡ್ ಇತ್ತು. ಆಗ ರಾಜ್ಯದಲ್ಲಿ ಬಹಳಷ್ಟು ಮಹಿಳೆಯರು ಬೆಲೆ ಏರಿಕೆ ಕುರಿತಾಗಿ ದೂರಿದ್ದರು. ಈ ಬಗ್ಗೆ ಏನಾದರೂ ಮಾಡಬೇಕು ಎಂದು ಯೋಚಿಸಿ, ಬೆಲೆ ಏರಿಕೆ ಕಡಿಮೆ ಮಾಡಲು ಈ ಯೋಜನೆಗಳನ್ನು ತಂದರು. ಇದರ ಬಗ್ಗೆ ವಿಚಾರ ಮಾಡಿ, ಮಹಿಳೆಯರ ಜೊತೆ ಚರ್ಚೆ, ಸಂವಾದ ಮಾಡಿ ಗ್ಯಾರಂಟಿ ಯೋಜನೆಗಳನ್ನು ಜಾರಿ ತಂದವರು ಡಿಕೆಶಿವಯರೇ. ಅವರ ಉದ್ದೇಶ ಸ್ಪಷ್ಟವಾಗಿದೆ. ಈ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಿದೆ. ಯಾವುದೇ ಪರಿಸ್ಥಿತಿಯಲ್ಲಿ ಪಂಚ ಗ್ಯಾರಂಟಿಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಹೇಳಿದರು.
Advertisement
ಒಬ್ಬರು, ಇಬ್ಬರು ಮಹಿಳೆಯರು ಹೇಳಿದರೆ ಜನಾದೇಶ ಆಗುವುದಿಲ್ಲ. ಲಕ್ಷಾಂತರ ಮಹಿಳೆಯರು ಇದರ ಉಪಯೋಗ ಪಡೆಯುತ್ತಿದ್ದಾರೆ. ಒಬ್ಬರು ಇಬ್ಬರು ಹೇಳುತ್ತಿದ್ದರೆ ಅವರು ಪ್ರಯಾಣ ಮಾಡುವುದನ್ನು ಬಿಡಲಿ. ದೇವರು ಅವರನ್ನು ಅನುಕೂಲವಾಗಿಟ್ಟಿರಬಹುದು ಒಳ್ಳೆಯದಾಗಲಿ. ನಿಗಮಕ್ಕೆ ಇದರಿಂದ ಯಾವುದೇ ನಷ್ಟವಿಲ್ಲ. ಶಕ್ತಿ ಯೋಜನೆ ಬರುವ ಮುಂಚೆ ನಿಗಮಗಳು ತೊಂದರೆಯಲ್ಲಿದ್ದವು. ಶಕ್ತಿ ಯೋಜನೆ ಬಂದ ನಂತರ ನಿಗಮಗಳು ಚೆನ್ನಾಗಿವೆ ಎಂದು ತಿಳಿಸಿದರು.
ಉಪಚುನಾವಣೆ ವಿಚಾರ:
ಉಪಚನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಪಕ್ಷ, ಧರ್ಮ, ಭಾಷಾತೀತವಾಗಿ ಸರ್ವೇ ಜನ ಸುಖಿನೋಭವಂತು ಎಂದು ಕಾಂಗ್ರೆಸ್ ಕೆಲಸ ಮಾಡುತ್ತಿದೆ. ನಮ್ಮನ್ನು ಜನ ಒಪ್ಪಿದ್ದಾರೆ, ಗೆಲ್ಲಿಸುತ್ತಾರೆ.
ವಕ್ಫ್ ವಿವಾದ ವಿಚಾರ:
ಸಿಎಂ ಸಿದ್ದರಾಮಯ್ಯ ನಿನ್ನೆಯೇ ಸ್ಪಷ್ಟಪಡಿಸಿದ್ದಾರೆ. ಒಂದು ಇಂಚು ಜಾಗ ಬಿಟ್ಟು ಕೊಡುವುದಿಲ್ಲ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ. ಕಾಗೆ ಕುಳಿತುಕೊಳ್ಳುವುದಕ್ಕೂ ಟೊಂಗೆ ಮುರಿಯುವುದಕ್ಕೂ ಸರಿಯಾಗಿದೆ. ನಾವು ಪಕ್ಷಾತೀತ ಜಾತ್ಯತೀತವಾಗಿ ಸರ್ಕಾರ ನಡೆಸುತ್ತೇವೆ. ಇಂಥ ವಿಚಾರಗಳಿಗೆ ಕಿವಿ ಕೊಡಬೇಡಿ. ನೋಟಿಸ್ ಹಿಂದೆ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಕೂಡ ವೈಯಕ್ತಿಕವಾಗಿ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಯಾವುದೇ ಸಂಘಟನೆ, ಜಾತಿಯನ್ನು ಓಲೈಸುವ ಕೆಲಸ ಆಗಬಾರದು.
ದರ್ಶನ್‌ಗೆ ಮಧ್ಯಂತರ ಬೇಲ್ ವಿಚಾರ:
ದೇಶದ ಕಾನೂನು ನೆಲದ ಕಾನೂನಿಗೆ ಎಲ್ಲರೂ ಗೌರವ ಕೊಡಬೇಕು. ನಾನೂ ಗೌರವ ಕೊಡಬೇಕು ಅವರೂ ಗೌರವ ಕೊಡಬೇಕು. ಮಧ್ಯಂತರ ಜಾಮೀನು ಸಿಕ್ಕಿದೆ. ದೀಪಾವಳಿ ಹಬ್ಬ ಇದೆ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಶುಭ ಕೋರಿದರು.ಇದನ್ನೂ ಓದಿ: ಚನ್ನಪಟ್ಟಣ ಚುನಾವಣೆಯಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗುತ್ತೆ: ಪೊನ್ನಣ್ಣ