ಬೆಂಗಳೂರು: ಹೊಸ ವರ್ಷದ ಸಂಭ್ರಮದಲ್ಲಿರುವ ಜನತೆಗೆ ಸಾರಿಗೆ ಇಲಾಖೆ ಶಾಕ್ ನೀಡುವ ಸೂಚನೆ ಸಿಕ್ಕಿದೆ. ಹೊಸ ವರ್ಷದ ಆರಂಭದ ತಿಂಗಳಲ್ಲೇ ಬಸ್ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ.
ಪೆಟ್ರೋಲ್-ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಅದರೆ, ಕಳೆದ ನಾಲ್ಕೈದು ವರ್ಷದಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಇಂಧನ ದರ ನಾಲ್ಕೈದು ವರ್ಷದಲ್ಲಿ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಗೆ ನಾಲ್ಕೂ ನಿಗಮಗಳು ಮನವಿ ಮಾಡಿದ್ದವು.
ಈ ಹಿಂದೆ 25% ಟಿಕೆಟ್ ದರ ಏರಿಕೆಗೆ ನಿಗಮಗಳು ಮನವಿ ಮಾಡಿದ್ದವು. 25 % ಅಲ್ಲದಿದ್ದರೂ, ಅದರ ಅರ್ಧದಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಸಂಕ್ರಾಂತಿ ನಂತರ ಟಿಕೆಟ್ ದರದ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿಎಂ ಜೊತೆ ಸಾರಿಗೆ ನೌಕರರ ಸಂಘಟನೆಗಳ ಸಭೆಯಲ್ಲಿ ಪ್ರಸ್ತಾಪವಾಗಬಹುದು ಎನ್ನಲಾಗಿದೆ.