ನವದೆಹಲಿ: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಕೆಯಾಗುವ ಸಾಧ್ಯತೆಯಿದೆ. ಅಧಿಕೃತವಾಗಿ ಘೋಷಣೆಯಾಗದೇ ಇದ್ದರೂ ಸೆಸ್ ಇಳಿಸುವ ಸಂಬಂಧ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಪ್ರಧಾನಿ ಮೋದಿ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಸೆಸ್ ಕಡಿಮೆ ಮಾಡುವ ಚಿಂತನೆ ಇದೆ. ನಮ್ಮ ಆರ್ಥಿಕ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
Advertisement
Advertisement
ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿಕೊಂಡರೆ ನಮ್ಮಲ್ಲಿ ದರ ಕಡಿಮೆಯಿದೆ. ಕೇಂದ್ರ ಸರ್ಕಾರದ ತೈಲ ನೀತಿಗಳ ಬದಲಾವಣೆಯಿಂದಾಗಿ ಬೆಲೆ ಏರಿಕೆಯಾಗಿದೆ ಎಂದು ತಿಳಿಸಿದರು.
Advertisement
ರೈತರ ಸಾಲಮನ್ನಾ ಮಾಡಲು ಕುಮಾರಸ್ವಾಮಿ ಸರ್ಕಾರ ಪೆಟ್ರೋಲ್ ಮೇಲಿನ ತೆರಿಗೆಯನ್ನು 30% ರಿಂದ 32% ಗೆ ಏರಿಕೆ ಮಾಡಿದೆ. ಹಾಗೆಯೇ ಡೀಸೆಲ್ ಮೇಲಿನ ತೆರಿಗೆಯನ್ನು 19% ನಿಂದ 21% ಗೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳದಿಂದ ಲೀಟರ್ ಪೆಟ್ರೋಲ್ ಬೆಲೆ 1.14 ರೂ. ಮತ್ತು ಡೀಸೆಲ್ ಬೆಲೆ 1.12 ರೂ.ನಷ್ಟು ಹೆಚ್ಚಾಗಲಿದೆ.
Advertisement
ರಾಜಸ್ಥಾನ ಸರ್ಕಾರ ಭಾನುವಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ಶೆ.4 ರಷ್ಟು ಇಳಿಕೆ ಮಾಡಿತ್ತು. ಶೇ.30 ರಷ್ಟಿದ್ದ ವ್ಯಾಟ್ ಶೇ.26ಕ್ಕೆ ಇಳಿಕೆ ಮಾಡಿದ್ದರೆ, ಇತ್ತ ಡೀಸೆಲ್ ಶೇ.22ರಿಂದ ಶೇ.18ಕ್ಕೆ ಇಳಿಕೆ ಮಾಡಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv