ಬೆಂಗಳೂರು: ಗ್ರೇಟರ್ ಬೆಂಗಳೂರು (GBA) ಚುನಾವಣೆ ಮತ್ತಷ್ಟು ವಿಳಂಬ ಆಗಲಿದೆ. ಡಿಸೆಂಬರ್‌ವರೆಗೆ ಚುನಾವಣೆ ಮುಂದೂಡಿಕೆ ಅಗತ್ಯ ಅಂತ ಸುಪ್ರೀಂಕೋರ್ಟ್ (Supreme Court) ರಾಜ್ಯ ಸರ್ಕಾರ ಕೋರಿದೆ
ಆಗಸ್ಟ್‌ನೊಳಗೆ ಚುನಾವಣೆ ನಡೆಸಬೇಕಂತ ಸುಪ್ರೀಂಕೋರ್ಟ್ ಆದೇಶ ನೀಡಿದ್ದರೂ ಕೂಡ ಎಲೆಕ್ಷನ್ ನಡೆಯೋದು ಡೌಟು ಆಗಿದೆ. ಬೆಂಗಳೂರಿನಲ್ಲಿ ಸುಮಾರು 1.03 ಕೋಟಿ ಮತದಾರರಿದ್ದಾರೆ. ಸುಮಾರು 40 ಲಕ್ಷ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ. ಕರಡು ಮತದಾರರ ಪಟ್ಟಿ ಪ್ರಕಟಣೆ, ಆಕ್ಷೇಪಣೆಗಳ ಸ್ವೀಕಾರ ಮತ್ತು ಅವುಗಳ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ಅರ್ಜಿಗಳು/ಆಕ್ಷೇಪಣೆಗಳು ಬರಬಹುದು ಎಂದು ಸರ್ಕಾರ ಅಂದಾಜಿಸಿದೆ. ಇದನ್ನೂ ಓದಿ: ಜು.12ರಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಣೆ – ಇಲಾಖೆ ಮಾಹಿತಿ
ಚುನಾವಣೆ ನಡೆಸುವ ಸಿಬ್ಬಂದಿಯೇ ಎಸ್‌ಐಆರ್ ಕೆಲಸದಲ್ಲೂ ನಿರತರಾಗಿದ್ದಾರೆ. ಪ್ರತಿಯೊಂದನ್ನೂ ವಿಚಾರಣೆ ನಡೆಸಿ ಆದೇಶ ನೀಡುವುದು ಕಡ್ಡಾಯವಾಗಿದೆ. ನಿಖರ ಮತದಾರರ ಪಟ್ಟಿಯಿಲ್ಲದೆ ಚುನಾವಣೆ ನಡೆಸುವುದು ಸೂಕ್ತವಲ್ಲ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಅಂತಿಮ ಹಾಗೂ ಸರಿಯಾದ ಮತದಾರರ ಪಟ್ಟಿ ಅಗತ್ಯ. ಹೀಗಾಗಿ, ಡಿಸೆಂಬರ್‌ವರೆಗೂ ಚುನಾವಣೆ ಮುಂದೂಡಿಕೆ ಅಗತ್ಯ ಇದೆ ಅಂತ ಸುಪ್ರೀಂಕೋರ್ಟ್ಗೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಚುನಾವಣೆ ಮುಂದೂಡಿಕೆಯನ್ನು ಸರ್ಕಾರ ಸಮರ್ಥಿಸಿಕೊಂಡರೆ, ವಿಪಕ್ಷಗಳು ಮುಗಿಬಿದ್ದಿವೆ.
